ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ಪ್ರಕರಣ: ಮೂವರು ಪೊಲೀಸರ ವಶಕ್ಕೆ

ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸಾಗರ: ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಸಮೀರ್, ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವಿಚಾರಣೆ ವೇಳೆ ತನ್ನ ತಂಗಿಯನ್ನು ಸುನೀರ್ 4-5 ತಿಂಗಳಿನಿಂದ ಚುಡಾಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲು ಮುಂದಾಗಿದ್ದೆ ಎಂದು ಸಮೀರ್ ಎಂಬಾತ ಹೇಳಿಕೊಂಡಿದ್ದಾನೆಂದು ವರದಿಗಳು ತಿಳಿಸಿವೆ.

ತಂಗಿಯನ್ನು ಚುಡಾಯಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದ್ದೆ. ಆದರೂ ಆತ ನಿಲ್ಲಿಸಿರಲಿಲ್ಲ. ತಂಗಿಯ ನಂಬರ್ ಕೊಡುವಂತೆಯೂ ಕೇಳಿದ್ದ. ಈ ಹಿನ್ನೆಲೆಯಲ್ಲಿ ಸೋಮವಾರ ಬೈಕ್ ನಲ್ಲಿ ಬರುತ್ತಿದ್ದ ಸಮೀರ್ ನನ್ನು ಸುನೀಲ್ ರೇಗಿಸಿದ್ದು, ಹೀಗಾಗಿ ಕೋಪಗೊಂಡು ಬೈಕ್ ನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನ ನಡೆಸಿರುವುದಾಗಿ ಸಮೀರ್ ವಿಚಾರಣೆ ವೇಳೆ ಹೇಳಿದ್ದಾನೆಂದು ತಿಳಿದುಬಂದಿದೆ.

ಸಮೀರ್ ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ. ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com