ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಗಳು ಬಿದ್ದು ತಾಯಿ, ಮಗು ಸಾವು

ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ಮಂಗಳವಾರ ತಿಳಿಬಂದಿದೆ.
ರಸ್ತೆಯಲ್ಲಿ ಕುಸಿದುಬಿದ್ದಿರುವ ಮೆಟ್ರೋ ಪಿಲ್ಲರ್.
ರಸ್ತೆಯಲ್ಲಿ ಕುಸಿದುಬಿದ್ದಿರುವ ಮೆಟ್ರೋ ಪಿಲ್ಲರ್.

ಬೆಂಗಳೂರು: ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ಮಂಗಳವಾರ ತಿಳಿಬಂದಿದೆ.

ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಮೇಲೆ ಬಿದ್ದಿದೆ.

ಪರಿಣಾಮ ತಾಯಿ ಹಾಗೂ ಮಗುವಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com