ಹಾಸನ: ಗುಂಡಿಕ್ಕಿ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ
ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕರ್ತ ಸೇರಿದಂತೆ ಮೂವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ.
Published: 10th January 2023 07:00 PM | Last Updated: 10th January 2023 07:00 PM | A+A A-

ಸಾಂದರ್ಭಿಕ ಚಿತ್ರ
ಹಾಸನ: ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕರ್ತ ಸೇರಿದಂತೆ ಮೂವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ.
ಗುಂಡಿನ ದಾಳಿಯಿಂದ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ. ತಂಬಲಗೇರಿ ಗ್ರಾಮದ ನವೀನ್ (39) ಮೃತಪಟ್ಟ ಆರ್ ಎಸ್ ಎಸ್ ಕಾರ್ಯಕರ್ತರಾಗಿದ್ದಾರೆ. ದಯಾನಂದ ಹಾಗೂ ಪದ್ಮನಾಭ ಅವರು ಗಂಭೀರವಾಗಿ ಗಾಯಗೊಂಡು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೇಮಾವತಿ ನದಿಯ ದಡದಲ್ಲಿ ಮೀನು ಹಿಡಿಯಲು ಬೆಂಕಿ ಹಾಕಿಕೊಂಡು ಕುಳಿತಿದ್ದ ನಾಲ್ವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ತೆರಳಿದ ಯಸಳೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.