ಧಾರವಾಡ: ಬೀದಿ ನಾಯಿಗಳ ಮಾರಕ ದಾಳಿಯಿಂದಾಗಿ ನಿರ್ಗತಿಕ ಮಹಿಳೆ ಸಾವು

ಆಘಾತಕಾರಿ ಘಟನೆಯೊಂದರಲ್ಲಿ ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ವೃದ್ಧ ನಿರ್ಗತಿಕ ಮಹಿಳೆ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು ಕೊಂದು ಹಾಕಿವೆ. ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಧಾರವಾಡ: ಆಘಾತಕಾರಿ ಘಟನೆಯೊಂದರಲ್ಲಿ ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ವೃದ್ಧ ನಿರ್ಗತಿಕ ಮಹಿಳೆ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು ಕೊಂದು ಹಾಕಿವೆ. ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯ ಖಬರಸ್ತಾನ ಗ್ರಾಮದಲ್ಲಿ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಆ ಪ್ರದೇಶದಲ್ಲಿ ಭಿಕ್ಷೆ ಬೇಡುವ ಮೂಲಕ ತನ್ನ ಜೀವನವನ್ನು ಸಾಗಿಸುತ್ತಿದ್ದರು.

ಕಳೆದ ರಾತ್ರಿ ಗ್ರಾಮದ ಕಟ್ಟಡವೊಂದರ ಬಳಿ ಮಲಗಿದ್ದ ವೇಳೆ ನಾಯಿಗಳ ಗುಂಪು ಆಕೆಯ ಮೇಲೆ ದಾಳಿ ಮಾರಕ ದಾಳಿ ನಡೆಸಿವೆ. ಪರಿಣಾಮ ಆಕೆ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ವಿಚಾರ ತಿಳಿದು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಅಂತಿಮ ಸಂಸ್ಕಾರದ ವ್ಯವಸ್ಥೆ ಮಾಡಿದ್ದಾರೆ.

ನಾಯಿಗಳ ಹಾವಳಿ ಬಗ್ಗೆ ದೂರು ನೀಡಿದರೂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದಿರುವುದನ್ನು ಗ್ರಾಮಸ್ಥರು ಖಂಡಿಸಿದ್ದಾರೆ. ಈಗಲಾದರೂ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂಬುದು ಅವರ ಆಗ್ರಹ.

ಈ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com