ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಡಗಿನ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Published: 11th January 2023 07:59 PM | Last Updated: 11th January 2023 07:59 PM | A+A A-

ಸಾಂದರ್ಭಿಕ ಚಿತ್ರ
ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಡಗಿನ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ತಾಲೂಕಿನ ಗ್ರಾಮಾಂತರ ಭಾಗದ ಸರ್ಕಾರಿ ಅನುದಾನಿತ ಶಾಲೆಯ ಶಿಕ್ಷಕ ಮನೋಹರ್ ನಾಯಕ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.
ಇದನ್ನು ಓದಿ: ಡಾ.ಶಿವಮೂರ್ತಿ ಮುರುಘಾ ಶರಣರು ನಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯವೆಸಗಿಲ್ಲ: ವಸತಿ ನಿಲಯದ ಬಾಲಕಿಯರು
ಸರ್ಕಾರಿ ಅನುದಾನಿತ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಮನೋಹರ್ ನಾಯಕ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ ತನ್ನ ತಾಯಿಯೊಂದಿಗೆ ಪೊಲೀಸ್ ಠಾಣೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ನಂತರ ಅದೇ ಶಾಲೆಯ ಮತ್ತೊಬ್ಬ ಬಾಲಕಿಯು ಮನೋಹರ್ ನಾಯ್ಕ್ ತನಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ. ಎಚ್ಚೆತ್ತ ಶಾಲೆಯ ಆಡಳಿತ ಮಂಡಳಿ, ಆರೋಪಿ ಶಿಕ್ಷಕನನ್ನು ಅಮಾನತುಗೊಳಿಸಿದೆ.