ಮಂಗಳೂರು: ನೇತ್ರಾವತಿ ನದಿಯಲ್ಲಿ ಬಜರಂಗ ದಳದ ಕಾರ್ಯಕರ್ತ ಶವವಾಗಿ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ಬಜರಂಗ ದಳದ ಕಾರ್ಯಕರ್ತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ಬಜರಂಗ ದಳದ ಕಾರ್ಯಕರ್ತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ (36) ಎಂದು ಗುರುತಿಸಲಾಗಿದೆ.

ಪಾಣೆಮಂಗಳೂರಿನ ಹಳೆ ಸೇತುವೆಯ ಮೇಲೆ ಬಿಟ್ಟುಹೋಗಿದ್ದ ಬೈಕ್ ಅನ್ನು ಕಂಡು ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಹುಡುಕಾಟದ ಬಳಿಕ ಪೊಲೀಸರಿಗೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com