ಮೆಟ್ರೋ ಪಿಲ್ಲರ್ ಕುಸಿತ ದುರಂತ: ದಾವಣಗೆರೆಯಲ್ಲಿ ತಾಯಿ-ಮಗನ ಅಂತ್ಯಸಂಸ್ಕಾರ

ಬೆಂಗಳೂರಿನ ಹೆಣ್ಣೂರು ಕ್ರಾಸ್ ಸಮೀಪದ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ವಿಹಾನ್ ಅಂತ್ಯಸಂಸ್ಕಾರವನ್ನು ದಾವಣಗೆರೆಯಲ್ಲಿ ಬಾಹುಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ನೆರವೇರಿಸಲಾಯಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದಾವಣಗೆರೆ: ಬೆಂಗಳೂರಿನ ಹೆಣ್ಣೂರು ಕ್ರಾಸ್ ಸಮೀಪದ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ವಿಹಾನ್ ಅಂತ್ಯಸಂಸ್ಕಾರವನ್ನು ದಾವಣಗೆರೆಯಲ್ಲಿ ಬಾಹುಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ನೆರವೇರಿಸಲಾಯಿತು.

ನಗರದ ಪಿಬಿ ರಸ್ತೆಯ ವೈಕುಂಠ ಧಾಮದಲ್ಲಿ ತೇಜಸ್ವಿನಿ ಹಾಗೂ ಗ್ಲಾಸ್ ಹೌಸ್ ಬಳಿಯ ರುದ್ರಭೂಮಿಯಲ್ಲಿ ವಿಹಾನ್ ಅಂತ್ಯಕ್ರಿಯೆ ಕುಟುಂಬಸ್ಥರ ಆಕ್ರಂದನದ ನಡುವೆ ನೆರವೇರಿತು.

ಈ ನಡುವೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವವರೆಗೆ ನಗರದಾದ್ಯಂತ ಎಲ್ಲಾ ಮೆಟ್ರೋ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

ನಾಗವಾರದ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳು, ಕೂಡಲೇ ಎಲ್ಲಾ ಮೆಟ್ರೋ ನಿರ್ಮಾಣ ಕಾಮಗಾರಿಗಳ ಸ್ಥಗಿತಗೊಳಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನಮ್ಮ ಕರ್ನಾಟಕ ಸೇನೆಯ ಎಂ.ಬಸವರಾಜ ಪಡಕೋಟೆ ಅವರು ಮಾತನಾಡಿ, ಮೃತರಿಗೆ ಸರ್ಕಾರ ನೀಡಿರುವ ಪರಿಹಾರದ ಮೊತ್ತವನ್ನು ರೂ.20 ಲಕ್ಷ ದಿಂದ 50 ಲಕ್ಷಕ್ಕೆ ಹೆಚ್ಚಿಸಬೇಕು ಒತ್ತಾಯಿಸಿದರು. ಟ್ಯಾನರಿ ರಸ್ತೆಯಲ್ಲೂ ಇದೇ ರೀತಿ ಪ್ರತಿಭಟನೆಗಳು ನಡೆದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com