ಬೆಂಗಳೂರು: 500 ಕೋಟಿ ರು. ವಂಚನೆ ಪ್ರಕರಣ: ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ
500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.
Published: 13th January 2023 10:10 AM | Last Updated: 13th January 2023 10:10 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈ ಮೂಲದ ಮಹೇಶ್ ಭೂಪತ್ ಕುಮಾರ್ ಓಜಾ ರನ್ನು ಬೆಂಗಳೂರಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪಿಎಂಎಲ್‌ಎ ವಿಶೇಷ 10 ದಿನಗಳ ಇಡಿ ಕಸ್ಟಡಿಗೆ ನೀಡಿದೆ.
ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕದಲ್ಲಿ ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಅಲ್ಲದೇ ಈ ಹಿಂದೆ ಮಹೇಶ್ ಭೂಪತ್ ಕುಮಾರ್ ಓಜಾರನ್ನು ಸಿಐಡಿ ಬಂಧಿಸಿತ್ತು.
ವಿವಿಧ ಗುಂಪುಗಳು ಮತ್ತು ವ್ಯಕ್ತಿಗಳು ಕೈಗೊಂಡ ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.