ಸ್ಯಾಂಟ್ರೋ ರವಿ ತಗಲಾಕ್ಕೊಂಡಿದ್ಹೇಗೆ: ರಾಯರ ದರ್ಶನಕ್ಕೆ ಬಂದಿದ್ದಾತನ ಹಿಂದೆ ಬಿದ್ದ ಪೊಲೀಸರಿಗೆ ಸಿಕ್ತಾ ಸುಳಿವು!

ಸ್ಯಾಂಟ್ರೋ ರವಿ ಪ್ರಕರಣ ರಾಜ್ಯ ಸರ್ಕಾರಕ್ಕೆ ನುಂಗಲಾದರ ಬಿಸಿತುಪ್ಪವಾಗಿ ಪರಿಣಮಿಸಿತ್ತು. ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜೊತೆ ಉತ್ತಮ ಸಂಪರ್ಕ ಹೊಂದಿದ್ದ ಮೈಸೂರಿನ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಸ್ಯಾಂಟ್ರೋ ರವಿ ಬಂಧನ
ಸ್ಯಾಂಟ್ರೋ ರವಿ ಬಂಧನ

ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣ ರಾಜ್ಯ ಸರ್ಕಾರಕ್ಕೆ ನುಂಗಲಾದರ ಬಿಸಿತುಪ್ಪವಾಗಿ ಪರಿಣಮಿಸಿತ್ತು. ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜೊತೆ ಉತ್ತಮ ಸಂಪರ್ಕ ಹೊಂದಿದ್ದ ಮೈಸೂರಿನ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

11 ದಿನಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಿ ಓಡಾಡುತ್ತಿದ್ದ ಸ್ಯಾಂಟ್ರೋ ರವಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿಬಿದ್ದಿದ್ದಾನೆ. ಇನ್ನು ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿರುವ ಮಾಹಿತಿ ಮಂತ್ರಾಲಯದ ರಾಯರ ದರ್ಶನಕ್ಕೆ ಬಂದಿದ್ದ ವ್ಯಕ್ತಿಯ ಹಿಂದೆ ಬಿದ್ದ ಪೊಲೀಸರಿಗೆ ಸಿಕ್ಕಿತ್ತು. ಕೂಡಲೇ ಪೊಲೀಸರು ಮಾಹಿತಿ ಆಧರಿಸಿ ಗುಜರಾತ್ ಗೆ ತೆರಳಿ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದರೂ ಸ್ಯಾಂಟ್ರೋ ರವಿ ಆಪ್ತರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇನ್ನು ಲಷ್ಮಿತ್ ಅಲಿಯಾಸ್ ಚೇತನ್ ಎಂಬಾತ ಜಾಮೀನು ಅರ್ಜಿ ಸಲ್ಲಿಸಿದ್ದು ನಿನ್ನೆ ಮಂತ್ರಾಲಯದ ರಾಯರ ದರ್ಶನಕ್ಕೆ ಬಂದಿದ್ದ. ಈ ವೇಳೆ ರಾಯಚೂರು ಪೊಲೀಸರು ಚೇತನ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಅಲ್ಲಿ ಚೇತನ್ ಸ್ಯಾಂಟ್ರೋ ರವಿ ಕುರಿತ ಮಾಹಿತಿಯನ್ನು ಬಹಿರಂಗಪಡಿಸಿದ್ದನು.

ಸ್ಯಾಂಟ್ರೋ ರವಿ ಬಂಧನದ ಕುರಿತಂತೆ ಪ್ರತಿಕ್ರಿಯಿಸಿರುವ ಎಡಿಜಿಪಿ ಅಲೋಕ್ ಕುಮಾರ್, ರಾಯಚೂರು, ಮಂಡ್ಯ, ರಾಮನಗರ ಎಸ್ಪಿಗಳು ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಮಾಂಸದಂದೆ, ಅಕ್ರಮ ವರ್ಗಾವಣೆ, ವಂಚನೆ, ಲೈಂಗಿಕ ದೌರ್ಜನ್ಯ, ಕೌಂಟುಬಿಕ ದೌರ್ಜನ್ಯ, ಲೇವಾದೇವಿ ಪ್ರಕರಣಗಳು ಹೊರ ಬರುತ್ತಿದ್ದಂತೆಯೇ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದನು. ಹೀಗಾಗಿ ಈತನ ಬಂಧನಕ್ಕಾಗಿ ಎಡಿಜಿಪಿ ಅಲೋಕ್‌ ಕುಮಾರ್ ಅವರು ಹಿರಿಯ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡಗಳನ್ನು ರಚಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com