ಜನವರಿ 19 ರಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ಭರದಿಂದ ಸಾಗಿದ ಸಿದ್ಧತೆ

ಜನವರಿ 19 ರಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿವೆ. ಮುಂಬರುವ ಚುನಾವಣೆಗೂ ಮುನ್ನ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಎರಡನೇ ಬಾರಿಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಕಲಬುರಗಿ: ಜನವರಿ 19 ರಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿವೆ. ಮುಂಬರುವ ಚುನಾವಣೆಗೂ ಮುನ್ನ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಎರಡನೇ ಬಾರಿಯಾಗಲಿದೆ.

ಭೇಟಿಯ ವೇಳೆ ಮೋದಿ ಅವರು ಮಾಲ್ಖೇಡ್‌ನಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ತಾಂಡಾಗಳ ನಿವಾಸಿಗಳಿಗೆ (ಗ್ರಾಮಗಳಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ತಾತ್ಕಾಲಿಕ ಮನೆ) ಆಸ್ತಿ ದಾಖಲೆಗಳನ್ನು ವಿತರಿಸಲಿದ್ದಾರೆ.

ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 51,900 ತಾಂಡಾ ನಿವಾಸಿಗಳಿಗೆ ಈ ದಾಖಲೆಗಳನ್ನು ವಿತರಿಸಲಾಗುತ್ತಿದೆ.
ಕಂದಾಯ ಇಲಾಖೆ ಅಧಿಕಾರಿಗಳ ಪ್ರಕಾರ, ಹೈದರಾಬಾದ್-ಕರ್ನಾಟಕ ಪ್ರದೇಶದ ರಾಯಚೂರು, ಬೀದರ್, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಿಂದ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ರಾಜ್ಯ ಕಂದಾಯ ಸಚಿವ ಆರ್. ಅಶೋಕ ಅವರು ಕಲಬುರಗಿಯಲ್ಲಿ ಅಧಿಕಾರಿಗಳ ಜತೆ ಸರಣಿ ಸಭೆ ನಡೆಸುತ್ತಿದ್ದಾರೆ.

ಕಾರ್ಯಕ್ರಮಕ್ಕಾಗಿ ಬೃಹತ್ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದ್ದು, 600 ಅಡುಗೆಯವರನ್ನು ನಿಯೋಜಿಸಲಾಗುವುದು ಮತ್ತು ಕಾರ್ಯಕ್ರಮದ ದಿನದಂದು 200 ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಫಲಾನುಭವಿಗಳನ್ನು 2,582 ಬಸ್‌ಗಳಲ್ಲಿ ಕರೆತರಲಾಗುವುದು ಎಂದು ಸಚಿವರು ತಿಳಿಸಿದರು.

ಕಲಬುರಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಲವನ್ನು ಸಾಬೀತುಪಡಿಸಲು ಖರ್ಗೆ ಬಯಸಿದ್ದಾರೆ.

ಕರ್ನಾಟಕದ ಆಡಳಿತಾರೂಢ ಬಿಜೆಪಿಯು ಕಲಬುರಗಿಯಲ್ಲಿ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿಯೇ ಖರ್ಗೆ ಅವರ ಯೋಜನೆಗಳನ್ನು ಸೋಲಿಸಲು ಬಯಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com