ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ

ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಡಿಪಿಆರ್‌ಗೆ ಕೇಂದ್ರ ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯೋಜನೆ ತಡೆಯುವ ಸಲುವಾಗಿ ಗೋವಾ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಡಿಪಿಆರ್‌ಗೆ ಕೇಂದ್ರ ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯೋಜನೆ ತಡೆಯುವ ಸಲುವಾಗಿ ಗೋವಾ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯುವುದಾಗಿ ಸಿಎಂ ಬೊಮ್ಮಾಯಿಯವರು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಯೋಜನೆ ತಡೆಯಲು ಗೋವಾ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಮೂಲಗಳ ಪ್ರಕಾರ, ಸುಪ್ರೀಂಕೋರ್ಟ್ ನಲ್ಲಿ ಮಧ್ಯಂತರ ಸಲ್ಲಿಸಿರುವ ಗೋವಾ ಸರ್ಕಾರದ ಈ ಪ್ರಯತ್ನ ವಿಫಲಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ವನ್ಯಜೀವಿ (ರಕ್ಷಣೆ) ಕಾಯ್ದೆ 1972ರ ಸೆಕ್ಷನ್ 29ರ ಪ್ರಕಾರ ವನ್ಯಜೀವಿ ಅಭಯಾರಣ್ಯಗಳಲ್ಲಿ ನೀರು ಹರಿಸುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂಬ ಕಾನೂನು ಆಧಾರದಲ್ಲಿ ಗೋವಾ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸಲು ನಿರ್ಧರಿಸಿದೆ.

ಮಹದಾಯಿ ಜಲಾನಯನ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಕೈಗೊಳ್ಳಲು ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ಸೇರಿದಂತೆ ಎಲ್ಲಾ ಅಗತ್ಯ ಅನುಮೋದನೆಗಳು ಬೇಕಾಗುತ್ತದೆ ಎಂದು ಮಹದಾಯಿ ಜಲ ವಿವಾದ ನ್ಯಾಯಮಂಡಳಿ ಷರತ್ತು ವಿಧಿಸಿದೆ ಎಂದು ಗೋವಾ ಸರ್ಕಾರ ವಾದಿಸುತ್ತಿದೆ. ಮಹದಾಯಿ ಜಲಾನಯನ ಪ್ರದೇಶದಿಂದ ಮಹದಾಯಿ ವನ್ಯಜೀವಿ ಅಭಯಾರಣ್ಯದ ಮೂಲಕ ನೀರು ಹರಿಸುವುದನ್ನು ಕೇಂದ್ರದ ಒಪ್ಪಿಗೆಯ ಮೂಲಕವಷ್ಟೇ  ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂಬುದು ಗೋವಾ ಸರ್ಕಾರದ ವಾದವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com