ಭಾರತೀಯ ಸೇನೆಯು ಭವಿಷ್ಯದಲ್ಲಿ ಸದಾ ಸಜ್ಜಾಗಿರಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭವಿಷ್ಯದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ತನ್ನ ಕಾರ್ಯತಂತ್ರಗಳು, ತಂತ್ರಗಳು ಮತ್ತು ನೀತಿಗಳ ಮೇಲೆ ಕಾರ್ಯನಿರ್ವಹಿಸುವ ಮೂಲಕ ಭಾರತೀಯ ಸೇನೆಯು ಭವಿಷ್ಯದಲ್ಲಿ ಸದಾ ಸಜ್ಜಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ನಡೆದ 75ನೇ ಸೇನಾ ದಿನಾಚರಣೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗಿಯಾಗಿದ್ದರು.
ಭಾನುವಾರ ಬೆಂಗಳೂರಿನಲ್ಲಿ ನಡೆದ 75ನೇ ಸೇನಾ ದಿನಾಚರಣೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗಿಯಾಗಿದ್ದರು.

ಬೆಂಗಳೂರು: ಭವಿಷ್ಯದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ತನ್ನ ಕಾರ್ಯತಂತ್ರಗಳು, ತಂತ್ರಗಳು ಮತ್ತು ನೀತಿಗಳ ಮೇಲೆ ಕಾರ್ಯನಿರ್ವಹಿಸುವ ಮೂಲಕ ಭಾರತೀಯ ಸೇನೆಯು ಭವಿಷ್ಯದಲ್ಲಿ ಸದಾ ಸಜ್ಜಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಭಾನುವಾರ ಇಲ್ಲಿನ ಆರ್ಮಿ ಸರ್ವೀಸ್ ಕಾರ್ಪ್ಸ್ ಮತ್ತು ಸೆಂಟರ್‌ನಲ್ಲಿ 75ನೇ ಸೇನಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಶೌರ್ಯ ಸಂಧ್ಯಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಂತ್ರಜ್ಞಾನದ ಪ್ರಗತಿಯೊಂದಿಗೆ ಭದ್ರತೆಗೆ ಸಂಬಂಧಿಸಿದ ಸವಾಲುಗಳೂ ಹೆಚ್ಚುತ್ತಿವೆ. ವರ್ಷಗಳು ಕಳೆದಂತೆ, ಪ್ರತಿಯೊಂದು ಕ್ಷೇತ್ರದಲ್ಲೂ ಗಮನಾರ್ಹ ಬದಲಾವಣೆ ಕಂಡುಬಂದಿದೆ ಮತ್ತು ಭದ್ರತಾ ಸವಾಲು ಕೂಡ ಬದಲಾವಣೆಗೆ ಸಾಕ್ಷಿಯಾಗಿದೆ. ಬದಲಾವಣೆಯ ವೇಗ ಘಾತೀಯವಾಗಿ ಹೆಚ್ಚುತ್ತಿದೆ. ಡ್ರೋಣ್'ಗಳು, ನೀರೊಳಗಿನ ಡ್ರೋಣ್'ಗಳು ಮತ್ತು ಕೃತಕ ಬುದ್ಧಿಮತ್ತೆ-ಶಕ್ತಗೊಂಡ ಶಸ್ತ್ರಾಸ್ತ್ರಗಳನ್ನು ಇಂದು ಬಳಸಲಾಗುತ್ತಿದೆ. ಇತ್ತೀಚಿನ ತಾಂತ್ರಿಕ ಪ್ರಗತಿಗಳು ಸವಾಲುಗಳನ್ನು ಹೆಚ್ಚಿಸಿವೆ. ನಾವು ನಾಳೆ, ನಂತರದ ದಿನ ಮತ್ತು ಮುಂದಿನ 25 ವರ್ಷಗಳವರೆಗೆ ಸಿದ್ಧರಾಗಿರಬೇಕು ಎಂದು ಹೇಳಿದರು,

ಸಶಸ್ತ್ರ ಪಡೆಗಳು ಬದಲಾಗುತ್ತಿರುವ ತಂತ್ರಜ್ಞಾನದೊಂದಿಗೆ ವೇಗವನ್ನು ಬೆಳೆಸಿಕೊಳ್ಳಬೇಕು. ಅದರ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಭವಿಷ್ಯಕ್ಕೆ ಸಿದ್ಧವಾಗಿರಲು ಅದನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ದೇಶದ ಪ್ರಾದೇಶಿಕ ಸಮಗ್ರತೆಯನ್ನು ಖಾತ್ರಿಪಡಿಸುವಲ್ಲಿ ಸೇನೆಯ ಶೌರ್ಯವನ್ನು ಶ್ಲಾಘಿಸಿದ ರಕ್ಷಣಾ ಸಚಿವರು, ಗಾಲ್ವಾನ್ ಮತ್ತು ತವಾಂಗ್‌ನಲ್ಲಿನ ಇತ್ತೀಚಿನ ಘಟನೆಗಳನ್ನು ಸ್ಮರಿಸಿದರು.

ರಾಷ್ಟ್ರದ ಪ್ರಗತಿಯಲ್ಲಿ ಸಶಸ್ತ್ರ ಪಡೆಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ, ಅದರ ಭದ್ರತಾ ವ್ಯವಸ್ಥೆಯ ಬಲದಿಂದಾಗಿ ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿಕ ಹೊರಹೊಮ್ಮಿದೆ.  ಆದ್ಯತೆ ಮತ್ತು ವಿಶ್ವಾಸಾರ್ಹ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ಕಳೆದ ಹಣಕಾಸು ವರ್ಷದಲ್ಲಿ, ಭಾರತವು ಅತಿ ಹೆಚ್ಚು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವು $ 83.57 ಶತಕೋಟಿಯನ್ನು ದಾಖಲಿಸಿದೆ. ನಾವು 2027 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆ ಮತ್ತು 2047 ರ ಹೊತ್ತಿಗೆ ಅತಿದೊಡ್ಡ ಆರ್ಥಿಕತೆಯನ್ನು ಹೊಂದಲಿದ್ದೇವೆ ”ಎಂದರು.

ಉಕ್ರೇನ್‌ನ ಯುದ್ಧ ಪೀಡಿತ ಪ್ರದೇಶಗಳಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಬಗ್ಗೆ ಉಲ್ಲೇಖಿಸಿದ ಅವರು, “ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಮರಳಿ ಕರೆತರುವಂತೆ ಕೂಗು ಎದ್ದಾಗ, ಪ್ರಧಾನಿ ಮೋದಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದರು. ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಲು ಅನುಕೂಲವಾಗುವಂತೆ ಸ್ವಲ್ಪ ಸಮಯದವರೆಗೆ ಯುದ್ಧವನ್ನು ನಿಲ್ಲಿಸಲಾಯಿತು ಎಂದ ತಿಳಿಸಿದರು.

ಇದಲ್ಲದೆ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ರಾಜ್ಯದವರಿಗೆ ಗೌರವ ಸಲ್ಲಿಸಲು ಕರ್ನಾಟಕದಲ್ಲಿ ಸೇನಾ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ. ಕರ್ನಾಟಕದಿಂದ ಬಂದಿರುವ ಫೀಲ್ಡ್ ಮಾರ್ಷಲ್ ಕೆಎಂ ಕಾರಿಯಪ್ಪ ಅವರಿಗೆ ನೀಡಲಾದಿಕುವ ಗೌರವ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಸೇನಾಪಡೆಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಬಿಎಸ್ ರಾಜು, ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, ದಕ್ಷಿಣ ಕಮಾಂಡ್ ಲೆಫ್ಟಿನೆಂಟ್ ಜನರಲ್ ಅಜಯ್ ಕುಮಾರ್ ಸಿಂಗ್, ಹಿರಿಯ ಸೇನಾ ಸಿಬ್ಬಂದಿ ಮತ್ತು ಇತರರು ಭಾಗಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com