ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಂಗಳವಾರ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ತೆರಳುತ್ತಿದ್ದ ದ್ವಿಚಕ್ರ ವಾಹನ, ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Published: 18th January 2023 12:09 AM | Last Updated: 18th January 2023 12:09 AM | A+A A-

ಸಾಂದರ್ಭಿಕ ಚಿತ್ರ
ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಂಗಳವಾರ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ತೆರಳುತ್ತಿದ್ದ ದ್ವಿಚಕ್ರ ವಾಹನ, ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ರಾತ್ರಿ 9 ಗಂಟೆಯ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ನಡೆದಿದ್ದು, ಮೃತ ವಿದ್ಯಾರ್ಥಿಗಳನ್ನು ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಮತ್ತು ಸಾಲಿಗ್ರಾಮ ನಿವಾಸಿ ವಾಗೀಶ್ (19) ಎಂದು ಗುರುತಿಸಲಾಗಿದೆ. ಮೃತ ಯುವಕರಿಬ್ಬರೂ ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.
ಇದನ್ನು ಓದಿ: ಚಂಡೀಗಢ: ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ಕಾರು ಡಿಕ್ಕಿ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವರದಿಗಳ ಪ್ರಕಾರ, ಇಬ್ಬರು ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದಾಗ ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಬೈಕ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.