ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸರ್ಕಾರದಿಂದಲೇ ವೇದಿಕೆ ಸೃಷ್ಟಿ: ಸಿಎಂ ಬೊಮ್ಮಾಯಿ‌

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಾಗಲು ರಾಜ್ಯ ಸರ್ಕಾರ ಆನ್‌ಲೈನ್ ವೇದಿಕೆಯನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಾಗಲು ರಾಜ್ಯ ಸರ್ಕಾರ ಆನ್‌ಲೈನ್ ವೇದಿಕೆಯನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಜೆಪಿ ನಗರದ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ‘ನಮ್ಮ ಹೆಮ್ಮೆ ನಮ್ಮ ಕಾಮನ್ ಮ್ಯಾನ್ ಸಿಎಂ’ ಪರಿಕಲ್ಪನೆಯಡಿ ಯುವ ಸಂಭಾಷಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನೇಕ ಖಾಸಗಿ ಸಂಸ್ಥೆಗಳು ಹಣ ಪಡೆದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುತ್ತಿವೆ. ಹೀಗಾಗಿ ಎಲ್ಲರಿಗೂ ಅನುಕೂಲವಾಗುವಂತೆ ಸರ್ಕಾರವೇ ಆ್ಯಪ್ ಅಭಿವೃದ್ಧಿಪಡಿಸುತ್ತಿದ್ದು, ಪ್ರಶ್ನೆಗಳ ಬ್ಯಾಂಕ್ ಒಳಗೊಂಡು ಹತ್ತಾರು ಮಾಹಿತಿಗಳು ಈ ಆ್ಯಪ್ ನಲ್ಲಿರಲಿವೆ. ಇದು ವಿದ್ಯಾರ್ಥಿಗಳಿಗೆ ಎಲ್ಲಾ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ ಎಂದು ಹೇಳಿದರು.

ಈ ಆನ್‌ಲೈನ್ ವೇದಿಕೆ ಖಾಸಗಿ ವೆಬ್‌ಸೈಟ್‌ಗಳಿಗೆ ಹೋಲುವಂತೆ ಇರಲಿದ್ದು, ಮಾಹಿತಿ ನೀಡಲು ಹಣ ಪಡೆದು ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುತ್ತದೆ, "ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಅಗತ್ಯವಿರುವ ಪ್ರಶ್ನೆ ಬ್ಯಾಂಕ್‌ಗಳು ಸೇರಿದಂತೆ ಎಲ್ಲಾ ಮಾಹಿತಿಯನ್ನು ಇದು ಹೊಂದಿರಲಿದೆ ಎಂದು ತಿಳಿಸಿದ್ದಾರೆ.

ಸರ್ಕಾರ ಡಿಜಿಟಲ್ ಕಲಿಕೆ ಮತ್ತು ಡಿಜಿಟಲ್ ತರಬೇತಿಗೆ ಒತ್ತು ನೀಡುತ್ತಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿದೆ ಎಂದರು.

ಇದೇ ವೇಳೆ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. ಬಳಿಕ ಅಧ್ಯಯನದ ಮೇಲೆ ಗಮನಹರಿಸುವಂತೆ ಸಲಹೆಗಳನ್ನು ನೀಡಿದರು. ಜೊತೆಗೆ ತಮ್ಮ ಕಾಲೇಜು ದಿನಗಳ ಅನುಭವಗಳನ್ನು ಹಂಚಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com