ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಸ್ಥಗಿತ: ಶಿಕ್ಷಣ ಸಚಿವರಿಗೆ ಜೆಡಿಎಸ್ ತರಾಟೆ
ರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.
Published: 19th January 2023 04:37 PM | Last Updated: 19th January 2023 04:38 PM | A+A A-

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.
ಈ ಕುರಿತ ವರದಿಯೊಂದನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಜೆಡಿಎಸ್, ಶಿಕ್ಷಣ ಸಚಿವರೇ ಇದು ನಿಮ್ಮ ಗಮನಕ್ಕೆ ಬಂದಿಲ್ಲವೆ? ಅಥವಾ ಆರ್ ಎಸ್ ಎಸ್ ನ ನಿರ್ದೇಶನಕ್ಕೆ ಕಾಯುತ್ತಿರುವಿರೆ? ನಿಮ್ಮ ಕಳಪೆ ಆಡಳಿತದಿಂದ ಮಕ್ಕಳ ಹೊಟ್ಟೆಗೆ ಯಾಕೆ ಮೋಸ ಮಾಡುವಿರಿ? ಎಂದು ಪ್ರಶ್ನಿಸಿದೆ.
ಮೊಟ್ಟೆಯ ಬೆಲೆಯು ಏರಿಕೆಯಾಗಿರುವುದೇ ಈ ಪರಿಸ್ಥಿತಿಗೆ ಕಾರಣ ಎನ್ನಲಾಗಿದೆ. ಆಡಳಿತ ನಡೆಸುವವರಿಗೆ ದೂರದೃಷ್ಟಿ ಇರಬೇಕು. ವ್ಯವಸ್ಥೆಯನ್ನು ಅರಿತು, ಸಮಸ್ಯೆಗಳನ್ನು ತಡೆಯುವ ಚಾಕಚಕ್ಯತೆ ಇರಬೇಕು. ಸಮಸ್ಯೆಯಾಗುವವರೆಗೂ ಕಾಯ್ದು, ನಂತರ ಪರಿಹಾರಕ್ಕೆ ತಡಕಾಡುವುದು ಒಳ್ಳೆಯ ಲಕ್ಷಣವಲ್ಲ ಎಂದು ಟೀಕಿಸಿದೆ.
ಈ ಹೊತ್ತಲ್ಲಿ ದರ ಪರಿಷ್ಕರಣೆ ಸಾಧ್ಯವಿಲ್ಲ. ಆ ಕುರಿತು ಪರಿಜ್ಞಾನ ಇದ್ದಿದ್ದರೆ, ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬರದಂತೆ ಮಾಡಬಹುದಿತ್ತು. ಈಗಲೂ ಕಾಲ ಮಿಂಚಿಲ್ಲ, ಇದಕ್ಕೆ ಪರಿಹಾರ ಹುಡುಕಿ. ಯಾವುದೇ ಕಾರಣಕ್ಕೂ ಮಕ್ಕಳಿಗೆ ಮೊಟ್ಟೆ ಸಿಗದ ಪರಿಸ್ಥಿತಿ ರಾಜ್ಯದಾದ್ಯಂತ ವಿಸ್ತರಿಸದ ಹಾಗೆ ನೋಡಿಕೊಳ್ಳಿ ಎಂದು ಸಲಹೆ ನೀಡಲಾಗಿದೆ.
ಈ ಹೊತ್ತಲ್ಲಿ ದರ ಪರಿಷ್ಕರಣೆ ಸಾಧ್ಯವಿಲ್ಲ. ಆ ಕುರಿತು ಪರಿಜ್ಞಾನ ಇದ್ದಿದ್ದರೆ, ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬರದಂತೆ ಮಾಡಬಹುದಿತ್ತು. ಈಗಲೂ ಕಾಲ ಮಿಂಚಿಲ್ಲ, ಇದಕ್ಕೆ ಪರಿಹಾರ ಹುಡುಕಿ. ಯಾವುದೇ ಕಾರಣಕ್ಕೂ ಮಕ್ಕಳಿಗೆ ಮೊಟ್ಟೆ ಸಿಗದ ಪರಿಸ್ಥಿತಿ ರಾಜ್ಯದಾದ್ಯಂತ ವಿಸ್ತರಿಸದ ಹಾಗೆ ನೋಡಿಕೊಳ್ಳಿ.
— Janata Dal Secular (@JanataDal_S) January 19, 2023
3/3