ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ
ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.
Published: 19th January 2023 12:19 PM | Last Updated: 19th January 2023 06:28 PM | A+A A-

ಪ್ರವೀಣ್ ನೆಟ್ಟಾರು
ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.
2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದರು.
ಇದೀಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯರಾಗಿರುವ ಬಂಟ್ವಾಳ ತಾಲ್ಲೂಕಿನ ಕೊಡಾಜೆಯ ಮೊಹಮ್ಮದ್ ಶರೀಫ್ (53) ಮತ್ತು ನೆಕ್ಕಿಲಾಡಿಯ ಕೆಎ ಮಸೂದ್ (40) ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು. ಇವರಿಬ್ಬರ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಹೇಳಿದೆ.
ಇವರಿಬ್ಬರ ಮಾಹಿತಿ ನೀಡುವವರನ್ನು ಗೌಪ್ಯವಾಗಿಡಲಾಗುವುದು ಎಂದೂ ಎನ್‌ಐಎ ತಿಳಿಸಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ದಾಳಿ; ಮೂವರು ಪಿಎಫ್‌ಐ ಮುಖಂಡರ ಬಂಧನ
ಈ ಬಗ್ಗೆ ಯಾವುದೇ ಮಾಹಿತಿ ಇದ್ದವರು ಬೆಂಗಳೂರಿನ ಎನ್‌ಐಎ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ಬೆಳ್ಳಾರೆಯ ಎಸ್ ಮಹಮ್ಮದ್ ಮುಸ್ತಫಾ, ಕೊಡಗು ಜಿಲ್ಲೆಯ ಮಡಿಕೇರಿಯ ಎಂಎಚ್ ತುಫೈಲ್, ಕಲ್ಲುಮುಟ್ಲುಮನೆಯ ಎಂ ಆರ್ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ಎಂಬ ನಾಲ್ವರು ಶಂಕಿತರ ಮಾಹಿತಿ ಹಂಚಿಕೊಂಡವರಿಗೆ ಎನ್‌ಐಎ 2022ರ ನವೆಂಬರ್‌ನಲ್ಲಿ ಒಟ್ಟು 14 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು.