
ಸಿಎಂ ಬಸವರಾಜ ಬೊಮ್ಮಾಯಿ ಸಭೆ
ಬೆಂಗಳೂರು: ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶನಿವಾರ ಶನಿವಾರ ಇಲಾಖಾವಾರು ಚರ್ಚೆ ನಡೆಸಿದರು.
ಮೊದಲ ದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಐಟಿ ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಮತ್ತು ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಗಳ ಪೂರ್ವಭಾವಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಇಲಾಖೆವಾರು ಬೇಡಿಕೆಗಳ ಪಟ್ಟಿಯನ್ನು ಸಚಿವರು, ಅಧಿಕಾರಿಗಳು ಸಲ್ಲಿಸಿದ್ದಾರೆ. ಕೆಲವು ಇಲಾಖೆಗಳಲ್ಲಿ ಹೊಸ ಯೋಜನೆಗಳ ಅನುಷ್ಟಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಿರುವ ಆಯವ್ಯಯದ ಕುರಿತು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ವೈದ್ಯಕೀಯ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ,ಉನ್ನತ ಶಿಕ್ಷಣ ಇಲಾಖೆ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ
— CM of Karnataka (@CMofKarnataka) January 21, 2023
1/2 pic.twitter.com/S2XvyOil4G
ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬಿಟ್ಟರೆ ಬೇರೆ ಸಚಿವರು ಸಭೆಯಲ್ಲಿ ಇರಲಿಲ್ಲ. ಉಳಿದ ಇಲಾಖೆಗಳ ಬೇಡಿಕೆಯನ್ನು ಅಧಿಕಾರಿಗಳೇ ಸಲ್ಲಿಸಿರುವುದಾಗಿ ತಿಳಿದುಬಂದಿದೆ.