ಬೆಂಗಳೂರು: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು
ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.
Published: 23rd January 2023 05:40 PM | Last Updated: 23rd January 2023 07:01 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.
32 ವರ್ಷದ ಗೌತಮ್ ಮೃತ ದುರ್ದೈವಿಯಾಗಿದ್ದಾರೆ. ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದಾಗ ಗೌತಮ್ ವಿದ್ಯುತ್ ಪ್ರವಹಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವತಿ ಬಂಧನ
ಗೌತಮ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ತಮ್ಮ ಮಗನ ಸಾವಿಗೆ ಕೆಇಬಿಯೇ ನೇರ ಹೊಣೆ ಎಂದು ಮೃತನ ತಂದೆ ರಂಗಸ್ವಾಮಿ ದೂರಿದ್ದಾರೆ.
'ನನ್ನ ಮಗನ ಸಾವಿಗೆ ಕೆಇಬಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ಗಳೇ ಕಾರಣ. ಆತನನ್ನು ಕೊಲೆ ಮಾಡಲಾಗಿದೆ ಎಂದು ರಂಗಸ್ವಾಮಿ ಆರೋಪಿಸಿದ್ದಾರೆ.