ವಿಜಯಪುರ: ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಡೆತ್ ನೋಟ್ ಪತ್ತೆ
ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.
Published: 24th January 2023 01:41 PM | Last Updated: 24th January 2023 01:41 PM | A+A A-

ಸಾಂದರ್ಭಿಕ ಚಿತ್ರ
ವಿಜಯಪುರ: ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿಯನ್ನು 17 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಲಿಂಗಸೂಗೂರು ತಾಲೂಕಿನ ಕೋಮಲಾಪುರ ನಿವಾಸಿ ಪದ್ಮಾವತಿ ನಾಗರಬೆಟ್ಟದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ವಿದ್ಯಾರ್ಥಿನಿ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಎಷ್ಟು ಹೊತ್ತಾದರೂ ಆಕೆ ಹೊರಗೆ ಬಾರದೇ ಇದ್ದಾಗ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಒಳಗೆ ಇಣುಕಿ ನೋಡಿದಾಗ ಘಟನೆ ಬಳಕಿಗೆ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತ ವಿದ್ಯಾರ್ಥಿನಿಯ ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು, 'ನಾನು ಕ್ಷಮೆಯಾಚಿಸುತ್ತೇನೆ. ನನಗೆ ವಿಜ್ಞಾನ ವಿಷಯ ಇಷ್ಟವಿಲ್ಲ ಮತ್ತು ಆದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದಿದ್ದಾಳೆ.
ಸೋಮವಾರ ಈ ಘಟನೆ ನಡೆದಿದೆ. ತನಿಖೆ ಕೈಗೆತ್ತಿಕೊಂಡಿರುವ ಮುದ್ದೇಬಿಹಾಳ ಪೊಲೀಸರು, ಬಾಲಕಿ ಈ ನಿರ್ಧಾರಕ್ಕೆ ಬರಲು ಕಾರಣವೇನು ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.