ಮೈಸೂರು ರಸ್ತೆ-ಕೆಂಗೇರಿ ನಡುವೆ ನೇರಳೆ ಮಾರ್ಗದ ಮೆಟ್ರೊ ರೈಲು ಸೇವೆ 4 ದಿನ ತಾತ್ಕಾಲಿಕ ಸ್ಥಗಿತ

ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಸೇವೆಯನ್ನು ಜನವರಿ 27ರಿಂದ ಜನವರಿ 30ರವರೆಗೆ 4 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಮ್ಮ ಮೆಟ್ರೊ
ನಮ್ಮ ಮೆಟ್ರೊ

ಬೆಂಗಳೂರು: ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಸೇವೆಯನ್ನು ಜನವರಿ 27ರಿಂದ ಜನವರಿ 30ರವರೆಗೆ 4 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕೆಂಗೇರಿಯಿಂದ ಚೆಲ್ಲಘಟ್ಟದವರೆಗೆ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಕಾಮಗಾರಿ ನಡೆಯುತ್ತಿರುವುದರಿಂದ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನೇರಳೆ ಮಾರ್ಗದ ಮೆಟ್ರೊ ರೈಲು ಸೇವೆಗಳನ್ನು ನಾಲ್ಕು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಈ ದಿನಗಳಲ್ಲಿ ಭೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ರೈಲು ಸೇವೆಗಳಿರುತ್ತವೆ. ಭೈಯಪ್ಪನಹಳ್ಳಿಯಿಂದ ಕೆಂಗೇರಿಯವರೆಗೆ ರೈಲು ಸೇವೆಗಳು ಜನವರಿ 31ಕ್ಕೆ ಬೆಳಗ್ಗೆ 5 ಗಂಟೆಗೆ ಪುನಾರಂಭವಾಗುತ್ತದೆ. 

ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣಗಳ ನಡುವಿನ ರೈಲು ಸೇವೆಗಳಲ್ಲಿ ಯಾವುದೇ ವ್ಯತ್ಯಾಸಗಳಿರುವುದಿಲ್ಲ ಎಂದು ಮೆಟ್ರೊ ರೈಲು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com