ತೊಗರಿ ಬೆಳೆ ಹಾನಿ: ಗರಿಷ್ಠ 2 ಹೆಕ್ಟೇರ್ ಗೆ 10,000 ರೂ. ಪರಿಹಾರ- ಸಿಎಂ ಬೊಮ್ಮಾಯಿ ಘೋಷಣೆ

ತೊಗರಿ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಿಗೊಳಿಸಿ 10,000 ರೂ. ಪರಿಹಾರ ಪ್ರಕಟಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಸಾಂದರ್ಭಿಕ ಚಿತ್ರ
ಸಿಎಂ ಬಸವರಾಜ ಬೊಮ್ಮಾಯಿ ಸಾಂದರ್ಭಿಕ ಚಿತ್ರ

ಬೆಂಗಳೂರು: ತೊಗರಿ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಿಗೊಳಿಸಿ 10,000 ರೂ. ಪರಿಹಾರ ಪ್ರಕಟಿಸಿದೆ.

ತೊಗರಿ ಬೆಳೆಗಾರರಿಗೆ ಪರಿಹಾರ ನೀಡುವ ಕುರಿತು ಕೃಷಿ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೀದರ್, ಕಲ್ಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ₹10,000 ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com