ಜಿಡಿಪಿಗಾಗಿ ಕೃಷಿ ಕೊಡುಗೆಯನ್ನು ಹೆಚ್ಚಿಸಬೇಕಿದೆ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ

ದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಕೃಷಿ ಕ್ಷೇತ್ರದ ಕೊಡುಗೆಯನ್ನು ಹೆಚ್ಚಿಸುವುದರತ್ತ ನನ್ನ ದೃಷ್ಟಿ ನೆಟ್ಟಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರು ಮಂಗಳವಾರ ಹೇಳಿದ್ದಾರೆ.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ

ಬೆಂಗಳೂರು: ದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಕೃಷಿ ಕ್ಷೇತ್ರದ ಕೊಡುಗೆಯನ್ನು ಹೆಚ್ಚಿಸುವುದರತ್ತ ನನ್ನ ದೃಷ್ಟಿ ನೆಟ್ಟಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರು ಮಂಗಳವಾರ ಹೇಳಿದ್ದಾರೆ.

ದೇಶಪಾಂಡೆ ಫೌಂಡೇಶನ್ ಆಯೋಜಿಸಿದ್ದ 'ಕೃಷಿ ದಿನಾಚರಣೆ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಮಹತ್ವ ಹಾಗೂ ಕೃಷಿ ಕ್ಷೇತ್ರಕ್ಕೆ ಅದರ ಮೌಲ್ಯದ ಒತ್ತಿ ಹೇಳಿದರು.

ಪ್ರಸ್ತುತ ಭಾರತದಲ್ಲಿ ಕೃಷಿ ಕ್ಷೇತ್ರವು ಜಿಡಿಪಿಗೆ ಶೇ.20ರಷ್ಟು ಮಾತ್ರ ಕೊಡುಗೆ ನೀಡುತ್ತಿದೆ. ಇದನ್ನು ಶೇ.40ಕ್ಕೆ ಹೆಚ್ಚುವ ಅಗತ್ಯವಿದ್ದು, ಇದರಿಂದ ನೇರವಾಗಿ ಅಥವಾ ಪರೋಕ್ಷವಾಗಿ ಉದ್ಯೋಗಾವಕಾಶಗಳು ಒದಗಿಬರಲಿದೆ ಎಂದು ತಿಳಿಸಿದರು.

ಎಲ್ಲಾ ರೈತರು ಮತ್ತು ಕೃಷಿ ಕಾರ್ಮಿಕರಿಗೆ ಶಿಕ್ಷಣ, ಆರೋಗ್ಯ ಮತ್ತು ಆಶ್ರಯದಲ್ಲಿ ಸಮಾನಾವಕಾಶ ಖಚಿತಪಡಿಸಿಕೊಳ್ಳಲು ಪ್ರತಿಯೊಬ್ಬ ವ್ಯಕ್ತಿಯ ತಲಾ ಆದಾಯವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಹೇಳಿದರು. ಇದೇ ವೇಳೆ ರೈತರು ಮತ್ತು ಕೃಷಿಕರಿಗೆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಇದರಿಂದ ಅವರು ಸಂಪನ್ಮೂಲಗಳನ್ನು ಉತ್ತಮವಾಗಿ ಬಳಸಿಕೊಳ್ಳಬಹುದು ಮತ್ತು ಕೃಷಿ ಆರ್ಥಿಕತೆಯನ್ನು ಸುಧಾರಿಸಲು ನೀರು ಮತ್ತು ಗೊಬ್ಬರದಂತಹ ಸಂಪನ್ಮೂಲಗಳ ಮೇಲಿನ ಅವಲಂಬನೆಯನ್ನು ಕಡಿತಗೊಳಿಸಬಹುದು ಎಂದರು.

ದೇಶಪಾಂಡೆ ಫೌಂಡೇಶನ್‌ನ ಸಹ ಸಂಸ್ಥಾಪಕ ಡಾ ಗುರುರಾಜ ದೇಶಪಾಂಡೆ ಅವರು ಮಾತನಾಡಿ, ಇಡೀ ಸಾಮಾಜಿಕ ವಲಯದಲ್ಲಿ ಸಂಪರ್ಕ ಕಡಿತವಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ರೈತರಿಗೆ ಪರಿಹಾರಗಳನ್ನು ನೀಡುತ್ತಿರುವವರಿಗೆ ರೈತರ ಜೀವನ ಅಥವಾ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಿಖರವಾಗಿ ತಿಳಿದಿಲ್ಲ. ಕೃಷಿ ಕ್ಷೇತ್ರದ ವೃತ್ತಿಪರರು ಪ್ರಸ್ತುತ ಭಾರತದಲ್ಲಿ ಈ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲು ಸಿದ್ಧರಿಲ್ಲ. ಹೀಗಾಗಿ ರೈತರೇ ಉದ್ಯಮಿಗಳಾಗಬೇಕೆಂದು ಕರೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com