74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಸ್ಟಾಫ್ ನರ್ಸ್, ಹೃದಯಾಘಾತದಿಂದ ಸಾವು!

74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಮಹಾತೇಂಶ್ ಸಾವು
ಮಹಾತೇಂಶ್ ಸಾವು

ರಾಯಚೂರು: 74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. 

ಮೃತ ಸ್ಟಾಫ್ ನರ್ಸ್ 42 ವರ್ಷದ ಮಹಾಂತೇಶ್ ಎಂದು ತಿಳಿದುಬಂದಿದೆ. ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದ ನಿವಾಸಿಯಾಗಿರುವ ಮಹಾಂತೇಶ್ ಅವರು 74ನೇ ಗಣರಾಜ್ಯೋತ್ಸವ ಹಿನ್ನೆಲೆ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ ತಂಡದ ಜತೆ ನೃತ್ಯ ಮಾಡುತ್ತಿದ್ದಾಗ ಮಹಾಂತೇಶ್ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 

ಮಹಾಂತೇಶ್ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.​ ರಾಯಚೂರು ಸಿಂಧನೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com