224 ಶಾಸಕರಲ್ಲಿ ಶೇಕಡ 10 ರಷ್ಟು ಮಂದಿ ಮಾತ್ರ ಸರ್ಕಾರಿ ಶಾಲೆಗಳ ದತ್ತು ಪಡೆದುಕೊಂಡಿದ್ದಾರೆ: ದೊರೆಸ್ವಾಮಿ

ರಾಜ್ಯದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವಲ್ಲಿ ಚುನಾಯಿತ ಪ್ರತಿನಿಧಿಗಳ ವೈಫಲ್ಯದ ಬಗ್ಗೆ ರಾಜ್ಯ ಸರಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ
ರಾಜ್ಯ ಸರಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ

ಮಂಗಳೂರು: ರಾಜ್ಯದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವಲ್ಲಿ ಚುನಾಯಿತ ಪ್ರತಿನಿಧಿಗಳ ವೈಫಲ್ಯದ ಬಗ್ಗೆ ರಾಜ್ಯ ಸರಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂಬಂಧ ಮಾತನಾಡಿರುವ ಅವರು, ರಾಜ್ಯದಲ್ಲಿ 224 ಶಾಸಕರಿದ್ದು, ಶೇ.10ರಷ್ಟು ಮಂದಿ ಮಾತ್ರ ಕೆಲವು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಶಾಲೆಯೊಂದನ್ನು ದತ್ತು ಪಡೆದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಕ್ಷೇತ್ರದಲ್ಲಿ ಹಲವು ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದಾರೆಂದು ಹೇಳಿದ್ದಾರೆ.

ನನ್ನ ಶಿಫಾರಸುಗಳ ಆಧಾರದ ಮೇಲೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ನೀತಿಗೆ ಹೊಸ ಆಯಾಮಗಳನ್ನು ಸೇರಿಸಲಾಗಿದೆ. 2020-21 ರ ಬಜೆಟ್‌ನಲ್ಲಿ ಶಾಸಕರು, ಎಂಎಲ್‌ಸಿಗಳು ಮತ್ತು ಸಂಸದರು ಮೂರರಿಂದ ಐದು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ಶಿಫಾರಸ್ಸಿನಲ್ಲಿ ತಿಳಿಸಲಾಗಿದೆ. ಶಾಲೆಗಳನ್ನು ದತ್ತು ತೆಗೆದುಕೊಳ್ಳುವಲ್ಲಿ ವಿಫಲರಾಗಿರುವ ತಮ್ಮ ಚುನಾಯಿತ ಪ್ರತಿನಿಧಿಗಳನ್ನು ಮತದಾರರು ಪ್ರಶ್ನಿಸಬೇಕು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com