ಬಿಜೆಪಿ ರೈತರ ಬದುಕನ್ನು ಸುಧಾರಿಸುತ್ತಿದೆ: ರಾಜ್ಕುಮಾರ್ ಚಾಹರ್

ಈ ದೇಶದ ಆರ್ಥಿಕ ಬೆಳವಣಿಗೆ ಹೆಚ್ಚಾಗಿ ರೈತರ ಮೇಲೆ ಅವಲಂಬಿತವಾಗಿದ್ದು, ಸಾವಯವ ಕೃಷಿಯಲ್ಲಿ ಅವರ ಉಪಕ್ರಮವು ಭಾರತವನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತಿದೆ ಎಂದು ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರಾಜ್ಕುಮಾರ್ ಚಾಹರ್ ಅವರು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಈ ದೇಶದ ಆರ್ಥಿಕ ಬೆಳವಣಿಗೆ ಹೆಚ್ಚಾಗಿ ರೈತರ ಮೇಲೆ ಅವಲಂಬಿತವಾಗಿದ್ದು, ಸಾವಯವ ಕೃಷಿಯಲ್ಲಿ ಅವರ ಉಪಕ್ರಮವು ಭಾರತವನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತಿದೆ ಎಂದು ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರಾಜ್ಕುಮಾರ್ ಚಾಹರ್ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಬಿಜೆಪಿ ಕಿಸಾನ್ ಮೋರ್ಚಾದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಕಿಸಾನ್ ಮೋರ್ಚಾದ ಭಾಗವಾಗಿದ್ದು, ಈ ನಿಟ್ಟಿನಲ್ಲಿ ರೈತ ಸಮುದಾಯದ ಕಲ್ಯಾಣಕ್ಕೆ ಮುಂದಾಗುವುದು ನಮ್ಮ ಜವಾಬ್ದಾರಿಯಾಗಿದೆ.  2014ರ ಮೊದಲು ಕೃಷಿ ಬಜೆಟ್ 49,000 ಕೋಟಿ ರೂ ಆಗಿತ್ತು. ಆದರೆ, ಈಗ ಪ್ರಧಾನಿ ಮೋದಿ ನೇತೃತ್ವದಲ್ಲಿ ಇದರ ಬಜೆಟ್ ರೂ. 1.35 ಲಕ್ಷ ಕೋಟಿ.ಗಿಂತ ಹೆಚ್ಚಿದೆ ಎಂದು ಹೇಳಿದ್ದಾರೆ.

ಈ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷಗಳು ರೈತರಿಗೆ ಏನಾದರೂ ಒಳ್ಳೆಯದನ್ನು ಮಾಡಿದ್ದರೆ ಅದು ಬಿಜೆಪಿಯಾಗಿದೆ. ಬಿಜೆಪಿಯಿಂದ ರೈತರಿಗೆ ನೀಡಲಾಗುತ್ತಿರುವ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು ಜಮೀನಿನಲ್ಲಿ ಬೆಳೆಗಳನ್ನು ಬೆಳೆಯುವ ರೈತರಿಗೆ ಮಾತ್ರವಲ್ಲದೆ ಮೀನು ಸಾಕಾಣಿಕೆದಾರರಿಗೆ ಮತ್ತು ಜಾನುವಾರು ಮಾಲೀಕರಿಗೆ ಆರ್ಥಿಕ ಸಹಾಯವನ್ನು ನೀಡುತ್ತಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬಡ ರೈತರಿಗೆ ತಲಾ 6,000 ರೂಪಾಯಿಗಳನ್ನು ನೀಡುವುದು ಮೋದಿ ಸರ್ಕಾರದ ಅತ್ಯಂತ ಪ್ರಯೋಜನಕಾರಿ ಯೋಜನೆಗಳಲ್ಲಿ ಒಂದಾಗಿದೆ. ಮೋದಿ ನೇತೃತ್ವದ ಸರ್ಕಾರ ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಪ್ರೊ.ಎಂ.ಎಸ್.ಸ್ವಾಮಿನಾಥನ್ ಅಧ್ಯಕ್ಷತೆಯ ರಾಷ್ಟ್ರೀಯ ರೈತರ ಆಯೋಗ ಸಲ್ಲಿಸಿದ ವರದಿಯು ಒಂದು ದಶಕಕ್ಕೂ ಹೆಚ್ಚು ಕಾಲ ಹಿಂದಿನ ಸರ್ಕಾರಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು ಎಂಬುದನ್ನು ತೋರಿಸಿತ್ತು. ಆದರೆ, ಮೋದಿ ಪ್ರಧಾನಿಯಾದ ನಂತರ ಈ ವರದಿಯನ್ನು ಗಂಭೀರವಾಗಿ ತೆಗೆದುಕೊಂಡು ರೈತರ ಜೀವನದಲ್ಲಿ ಆರೋಗ್ಯಕರ ಬದಲಾವಣೆಗಳನ್ನು ತಂದರು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com