
ಸಂಗ್ರಹ ಚಿತ್ರ
ಬೆಂಗಳೂರು: ನಕಲಿ ಸ್ವಾಧೀನ ಪ್ರಮಾಣಪತ್ರ (ಒಸಿ) ನೀಡಿಕೆ ಕುರಿತು ಆಂತರಿಕ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೋಮವಾರ ಸೂಚನೆ ನೀಡಿದೆ.
ನಕಲಿ ಸ್ವಾಧೀನ ಪ್ರಮಾಣಪತ್ರ ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆಂತರಿಕ ತನಿಖೆ ನಡೆಸುವಂತೆ ನಗರ ಯೋಜನಾ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಶಿವಾಜಿನಗರಕ್ಕೆ ಸಮೀಪವಿರುವ ಕೆಲವು ಪ್ರದೇಶಗಳಲ್ಲಿ ನಕಲಿ ಸ್ವಾಧೀನ್ ಪ್ರಮಾಣಪತ್ರ ನೀಡಿರುವುದು ನಮ್ಮ ಗಮನಕ್ಕೆ ಬಂದಿದ್ದು, ನಿವೃತ್ತ ಅಧಿಕಾರಿಯೊಬ್ಬರು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಗಿರಿನಾಥ್ ಅವರು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಅತಿಕ್ರಮಣ ಸಮೀಕ್ಷೆ ಬಹುತೇಕ ಪೂರ್ಣ, ಶೀಘ್ರದಲ್ಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ!
ನಗರದಾದ್ಯಂತ ಇದೇ ರೀತಿ ಆಗಬಹುದು ಎಂದು ಕೆಲವು ಕಾರ್ಯಕರ್ತರು ತಿಳಿಸಿದ್ದು, ಅಂತಹ ಘಟನೆಗಳನ್ನು ಪರಿಶೀಲಿಸಲು ಮತ್ತು ವಿಚಾರಣೆ ನಡೆಸಲು ನಾನು ನಗರ ಯೋಜನೆ ಹೆಚ್ಚುವರಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದ್ದಾರೆ.
ಸ್ವಾಧೀನ ಪ್ರಮಾಣಪತ್ರಗಳನ್ನು ವೆಬ್‌ಸೈಟ್‌ಗಳಿಗೆ ಅಪ್‌ಲೋಡ್ ಮಾಡುತ್ತಿರುವುದರಿಂದ ವಂಚನೆಗಳು ನಡೆದಿರಬಹುದು. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಸ್ವಯಂಚಾಲಿತ ವ್ಯವಸ್ಥೆ ನೆರವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.