ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆಲಸದ ಸ್ಥಳದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ; ಸರ್ಕಾರಿ ಆಡಳಿತಾಧಿಕಾರಿ ವಿರುದ್ಧ ಎಫ್‌ಐಆರ್‌

ಕಾನೂನು ಮತ್ತು ಅಭಿಯೋಜನಾ ಇಲಾಖೆಯ ಕಾನೂನು ಅಧಿಕಾರಿ (ಹಿರಿಯ) ಕಚೇರಿಯ ಆಡಳಿತಾಧಿಕಾರಿ ನಾರಾಯಣಸ್ವಾಮಿ, ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮಹಿಳಾ ಉದ್ಯೋಗಿಯೊಬ್ಬರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಕಾನೂನು ಮತ್ತು ಅಭಿಯೋಜನಾ ಇಲಾಖೆಯ ಕಾನೂನು ಅಧಿಕಾರಿ (ಹಿರಿಯ) ಕಚೇರಿಯ ಆಡಳಿತಾಧಿಕಾರಿ ನಾರಾಯಣಸ್ವಾಮಿ, ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮಹಿಳಾ ಉದ್ಯೋಗಿಯೊಬ್ಬರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ತಾನು ಈ ಹಿಂದೆ ದಾವಣಗೆರೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ವರ್ಷ ವಿವಿ ಟವರ್‌ನಲ್ಲಿರುವ ಬೆಂಗಳೂರು ನಗರ ವಿಭಾಗದ ಕಾನೂನು ಅಧಿಕಾರಿಗಳ (ಹಿರಿಯ) ಕಚೇರಿಗೆ ವರ್ಗಾವಣೆಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಎಒ ಆಗಿ ಕಾರ್ಯನಿರ್ವಹಿಸುತ್ತಿರುವ ನಾರಾಯಣಸ್ವಾಮಿ ಅವರು ಜನವರಿಯಲ್ಲಿ ಲೈಂಗಿಕ ಅನುಕೂಲಕ್ಕಾಗಿ ಕಿರುಕುಳ ನೀಡಲಾರಂಭಿಸಿದರು ಆದರೆ ಅವರು ಅವರ ಬೇಡಿಕೆಗಳಿಗೆ ಕಿವಿಗೊಡಲಿಲ್ಲ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಕಚೇರಿಯಲ್ಲಿ ದಲಾಯತ್ ಆಗಿ ಕೆಲಸ ಮಾಡುವ ಮತ್ತೊಬ್ಬ ಸಹೋದ್ಯೋಗಿಯ ಮೂಲಕ ಮಹಿಳೆಯ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ.

ಜೂನ್ 14ರಂದು ಕಚೇರಿ ಸಹಾಯಕ ಕೂಡ ನಾರಾಯಣಸ್ವಾಮಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಪೀಡಿಸಿದ್ದ. ಅದಕ್ಕೂ ನಾನು ಒಪ್ಪಿರಲಿಲ್ಲ. ನಂತರ, ನನಗೆ ಬೇರೆಡೆ ವರ್ಗಾವಣೆ ಆಗಿತ್ತು. ಇಲಾಖೆಯಲ್ಲಿ ಹೇಗೆ ಕೆಲಸ ಮಾಡುತ್ತಿಯಾ ನೋಡುತ್ತೇನೆ? ಎಂದು ನಾರಾಯಣಸ್ವಾಮಿ ಬೆದರಿಸುತ್ತಿದ್ದಾರೆ. ನನಗಾದ ಅನ್ಯಾಯದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದೆ. ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ, ಠಾಣೆಗೆ ದೂರು ನೀಡುತ್ತಿದ್ದೇನೆ. ನಾರಾಯಣಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿಧಾನಸೌಧ ಪೊಲೀಸರು ನಾರಾಯಣಸ್ವಾಮಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ. ಇದರ ಭಾಗವಾಗಿ ಸಾಕ್ಷಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com