ವಿಜಯನಗರ: ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
Published: 02nd July 2023 08:33 PM | Last Updated: 02nd July 2023 08:33 PM | A+A A-

ಸಾಂದರ್ಭಿಕ ಚಿತ್ರ
ವಿಜಯನಗರ: ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ತೀವ್ರ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಪ್ಪಿನಕೆರೆ ಗ್ರಾಮದ ಪಕ್ಕದ ರಸ್ತೆಯ ಹಳ್ಳ ಹಾಗೂ ಕಟ್ಟೆ ಬಳಿ 3-4 ಕಡೆ ಪೈಪ್ ಡ್ಯಾಮೇಜ್ ಆಗಿ ಕಳೆದೆರಡು ದಿನದಿಂದ ಬಡೇಲಡಕು ದೊಡ್ಡಗೊಲ್ಲರಹಟ್ಟಿ ಗ್ರಾಮಕ್ಕೆ ಕಲುಷಿ ನೀರು ಸರಬರಾಜು ಆಗಿತ್ತು. ಈ ನೀರನ್ನು ಕುಡಿದಿದ್ದ ಗ್ರಾಮಸ್ಥರಲ್ಲಿ ವಾಂತಿಭೇದಿ ಶುರುವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.
ಇದನ್ನೂ ಓದಿ: ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೂವರು ಸಾವು ಪ್ರಕರಣ; ಇಬ್ಬರು ಪಿಡಿಒಗಳ ಅಮಾನತು
ಸದ್ಯ ಕಲುಷಿತ ನೀರಿನ ಮಾದರಿಯನ್ನು ಬಳ್ಳಾರಿ ಪರೀಕ್ಷಾ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರನ್ನು ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದರು.