ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧ
ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನಗಳ ಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದು, ಸತ್ಯಸಾಯಿ ಲೋಕಸೇವಾ ಆಶ್ರಮದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Published: 02nd July 2023 02:09 PM | Last Updated: 02nd July 2023 02:09 PM | A+A A-

ನಂದಿಬೆಟ್ಟ
ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನಗಳ ಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದು, ಸತ್ಯಸಾಯಿ ಲೋಕಸೇವಾ ಆಶ್ರಮದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೀಗಾಗಿ ಭದ್ರತೆ ದೃಷ್ಟಿಯಿಂದ ನಂದಿಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಇಂದಿನಿಂದ ಎರಡು ದಿನ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದಾರೆ. ಆದರೆ, ಪ್ರವೇಶ ನಿರ್ಬಂಧದ ಬಗ್ಗೆ ಮಾಹಿತಿ ಇಲ್ಲದೇ ಗಿರಿಧಾಮಕ್ಕೆ ಆಗಮಿಸಿದ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ.
ಇಂದು ಬೆಳಗ್ಗೆ 6 ರಿಂದ ಜುಲೈ 3ರ ಸಂಜೆ 6ರವರೆಗೆ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧ ಇರಲಿದೆ. ಸದ್ಯ ಗಿರಿಧಾಮಗಳಿಗೆ ಬರದಂತೆ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.