ಗದಗ: ಸಾರ್ವಜನಿಕರಿಗೆ ತೊಂದರೆ ನೀಡಬಾರದು, ಅವರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಎಚ್.ಕೆ ಪಾಟೀಲ್ ಸೂಚಿಸಿದ್ದಾರೆ.
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಭೆ (ಕೆಡಿಪಿ) ಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ತೊಂದರೆ ನೀಡಬಾರದು, ಒಂದು ವೇಳೆ, ಸೂಚನೆ ನಿರ್ಲಕ್ಷಿಸುವವರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದರು.
ನೀರಿಗಾಗಿ ಸಹಾಯವಾಣಿ ಆರಂಭಿಸಿ, ಕುಡಿಯುವ ನೀರು ಪೂರೈಕೆಯಾಗದ ನಿವಾಸಿಗಳು ಉಚಿತ ನೀರಿನ ಟ್ಯಾಂಕರ್ ಸೇವೆಗೆ ಕರೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು. ಸಹಾಯವಾಣಿಗೆ ಕರೆ ಮಾಡಿದ ಅರ್ಧ ಗಂಟೆಯೊಳಗೆ ಸಂಬಂಧಪಟ್ಟ ಅಧಿಕಾರಿಗಳು ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಬೇಕು ಎಂದು ಎಚ್.ಕೆ.ಪಾಟೀಲ ಹೇಳಿದರು. ರೈತರಿಗೆ ಬೆಳೆ ವಿಮೆ ಕುರಿತು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮಾಜಿ ಸಚಿವ ಸಿ.ಸಿ.ಪಾಟೀಲ ಮಾತನಾಡಿ, ಅಕ್ರಮ ಮರಳು ದಂಧೆ ಕುರಿತು ಅಧಿಕಾರಿಗಳು ನಿಗಾವಹಿಸಿ ಕಪ್ಪತಗುಡ್ಡ ಉಳಿಸಬೇಕು, ವಿಂಡ್ ಮಿಲ್ ಮಾಲೀಕರ ಮೇಲೆ ದೂರು ಬಂದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಚ್.ಕೆ.ಪಾಟೀಲರಿಗೆ ಪ್ರವಾಸೋದ್ಯಮ ಇಲಾಖೆ ದೊರೆತಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕು ಎಂದರು.
Advertisement