ಬಳ್ಳಾರಿ: ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 45 ಮಂದಿ ಆಸ್ಪತ್ರೆಗೆ ದಾಖಲು

ಮೂರು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 45 ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಡಳಿತ ಗ್ರಾಮಕ್ಕೆ ದೌಡಾಯಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.
ಸಿದ್ದಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು
ಸಿದ್ದಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು

ಬಳ್ಳಾರಿ: ಮೂರು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 45 ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಡಳಿತ ಗ್ರಾಮಕ್ಕೆ ದೌಡಾಯಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.

ಜೂನ್ 28 ರಂದು ಗ್ರಾಮಸ್ಥರಿಗೆ ಕುಡಿಯುವ ನೀರು ಕಲುಷಿತವಾಗುವ ಲಕ್ಷಣಗಳು ಕಂಡುಬಂದವು. ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಯು ನೀರಿನ ಮಾಲಿನ್ಯವನ್ನು ದೃಢಪಡಿಸಿದೆ. ಇದು ಇತ್ತೀಚಿನ ಭಾರೀ ಮಳೆಯಿಂದ ಉಂಟಾಗಿರಬಹುದು. ಆಡಳಿತದಿಂದ ತಾತ್ಕಾಲಿಕ ಆಸ್ಪತ್ರೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಮಾರ್ಗಸೂಚಿಗಳನ್ನು ಅನುಸರಿಸಲು ಗ್ರಾಮಸ್ಥರಿಗೆ ವೈದ್ಯರು ಸೂಚಿಸಿದ್ದಾರೆ. 

ನೀರು ಕಲುಷಿತಗೊಂಡಿದ್ದರಿಂದ ಸುಮಾರು 45 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ  35 ಮಂದಿ ಬಿಡುಗಡೆಯಾಗಿದ್ದಾರೆ. ವಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಶೀಘ್ರದಲ್ಲೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ತಾರಾನಗರ ಗ್ರಾಮದಲ್ಲಿ ತುರ್ತು ಮತ್ತು ತಾತ್ಕಾಲಿಕ ಆಸ್ಪತ್ರೆ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್. ಜನಾರ್ದನ್ ತಿಳಿಸಿದ್ದಾರೆ.

ಔಷಧಿಗಳನ್ನು ತೆಗೆದುಕೊಳ್ಳುವ ಮೊದಲು ನೀರನ್ನು ಕುದಿಸಿ ತಣ್ಣಗೆ ಮಾಡುವಂತೆ  ಸೂಚನೆ ನೀಡಿದ್ದೇವೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇತ್ತೀಚೆಗೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಆಶಾ ಆರೋಗ್ಯ ಕಾರ್ಯಕರ್ತರು ಈಗಾಗಲೇ ಮನೆ ಮನೆ ಸಮೀಕ್ಷೆ ನಡೆಸಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಮತ್ತೋರ್ವ ಹಿರಿಯ ಅಧಿಕಾರಿ ಮಾಹಿತಿ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com