ಮುಂಗಾರು ಮಳೆ: ಪರಿಸ್ಥಿತಿ ಎದುರಿಸಲು ಸಂಪೂರ್ಣ ಸನ್ನದ್ಧ; ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಈ ವರ್ಷ ಮುಂಗಾರು ಮಳೆಯಿಂದಾಗುವ ಪರಿಸ್ಥಿತಿ ಎದುರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಂಪೂರ್ಣ ಸನ್ನದ್ಧವಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
Published: 04th July 2023 12:42 PM | Last Updated: 04th July 2023 06:39 PM | A+A A-

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಈ ವರ್ಷ ಮುಂಗಾರು ಮಳೆಯಿಂದಾಗುವ ಪರಿಸ್ಥಿತಿ ಎದುರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಂಪೂರ್ಣ ಸನ್ನದ್ಧವಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಸೋಮವಾರ ವಲಯ ಆಯುಕ್ತರೊಂದಿಗೆ ಸಮನ್ವಯ ಸಮಿತಿ ಸಭೆ ನಡೆಸಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಅವು, ಕೆಲವು ಸ್ಥಳಗಳಲ್ಲಿ ಚರಂಡಿಗಳ ಹೂಳು ತೆಗೆಯುವುದು ಮತ್ತು ಇತರ ಸಿವಿಲ್ ಕಾಮಗಾರಿಗಳು ನಡೆಯುತ್ತಿದ್ದು, ಮಳೆಯಿಂದ ಹೆಚ್ಚಿನ ಹಾನಿಯಾಗದಂತೆ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಪ್ರವಾಹ ಮತ್ತಿತರ ಮಳೆ ಸಂಬಂಧಿತ ತುರ್ತು ಸಂದರ್ಭಗಳಲ್ಲಿ ಸ್ಥಳಕ್ಕೆ ಧಾವಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಬಿಬಿಎಂಪಿ ಮತ್ತು ಇತರ ಇಲಾಖೆಗಳನ್ನೊಳಗೊಂಡ ವಾಟ್ಸಾಪ್ ಗ್ರೂಪ್ ರಚಿಸಲಾಗಿದೆ ಎಂದು ಗಿರಿನಾಥ್ ಹೇಳಿದರು.
ಇದನ್ನೂ ಓದಿ: ಬೆಂಗಳೂರು ನಗರ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ: ನಗರದ ಶಾಸಕರು, ಅಧಿಕಾರಿಗಳ ಸಲಹೆ ಕೇಳಿದ ಡಿಸಿಎಂ ಶಿವಕುಮಾರ್
ಮೇ ಮತ್ತು ಜೂನ್‌ನಲ್ಲಿ ಮುಂಗಾರು ವಿಳಂಬ ಕಾರಣದಿಂದ ಬಿಬಿಎಂಪಿಗೆ ವಿಲೀನಗೊಂಡ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಬಗ್ಗೆ ಹೆಚ್ಚುತ್ತಿರುವ ಕಾಳಜಿಗೆ ಸಂಬಂಧಿಸಿದಂತೆ ಯೋಜನೆ ರೂಪಿಸಲಾಗುವುದು ಮತ್ತು ಮನವಿಗಳ ಹಿನ್ನೆಲೆಯಲ್ಲಿ ಬೋರ್ ವೆಲ್ ಕೊರೆಸಲಾಗುವುದು ಎಂದರು. ಬೆಂಗಳೂರು ದಕ್ಷಿಣ ಒಂದರಲ್ಲೇ 50 ಬೋರ್‌ವೆಲ್‌ಗಳನ್ನು ಅಳವಡಿಸಲು ಬೇಡಿಕೆ ಇದೆ ಎಂದರು.
ಬಿಬಿಎಂಪಿ ಕಾಮಗಾರಿಗಳಲ್ಲಿ ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ (ಕೆಆರ್‌ಐಡಿಎಲ್) ಹಗರಣದ ಕುರಿತು ತನಿಖೆಯನ್ನು ಪ್ರಾರಂಭಿಸಲು ಮತ್ತು ವರದಿ ನೀಡಲು ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರನ್ನು ನೇಮಿಸಲಾಗಿದೆ ಎಂದು ಆಯುಕ್ತರು ಹೇಳಿದರು.