ಕೊಡಗಿನಲ್ಲಿ 24 ಗಂಟೆಯಲ್ಲಿ ಸರಾಸರಿ 36.43 ಮಿ.ಮೀ.ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾಗಿರುವ ಮಡಿಕೇರಿ-ಕೊಡಗಿನಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 36.43 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 65.83 ಮಿ.ಮೀ. ಮಳೆಯಾಗಿತ್ತು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗಿನಲ್ಲಿ ಮಳೆ
ಕೊಡಗಿನಲ್ಲಿ ಮಳೆ

ಮಡಿಕೇರಿ: ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾಗಿರುವ ಮಡಿಕೇರಿ-ಕೊಡಗಿನಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 36.43 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 65.83 ಮಿ.ಮೀ. ಮಳೆಯಾಗಿತ್ತು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜನವರಿಯಿಂದ ಇಲ್ಲಿಯವರೆಗಿನ ಮಳೆ 393.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 956.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.78 ಮಿ.ಮೀ ಆಗಿದ್ದು, ಕಳೆದ ವರ್ಷ ಇದೇ ದಿನ 101.80 ಮಿ.ಮೀಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 617.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1412.59 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.87 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 54.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 279.49 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 778.59 ಮಿ.ಮೀ. ಮಳೆಯಾಗಿತ್ತು. ಅಂತೆಯೇ ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 40.87 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 282.59 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 679.31 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ದಾಖಲಾಗಿರುವ ಮಳೆ ವಿವರ:-
ಮಡಿಕೇರಿ ಕಸಬಾ 44, ನಾಪೋಕ್ಲು 40.40, ಸಂಪಾಜೆ 32.50, ಭಾಗಮಂಡಲ 78.20, ವಿರಾಜಪೇಟೆ ಕಸಬಾ 44.80, ಹುದಿಕೇರಿ 33, ಶ್ರೀಮಂಗಲ 53.20, ಪೊನ್ನಂಪೇಟೆ 20, ಅಮ್ಮತಿ 49, ಬಾಳೆಲೆ 9.20, ಸೋಮವಾರಪೇಟೆ ಕಸಬಾ 28.60, ಶನಿವಾರಸಂತೆ 15.20, ಶಾಂತಳ್ಳಿ 66, ಕೊಡ್ಲಿಪೇಟೆ 18.20, ಕುಶಾಲನಗರ 7.60, ಸುಂಟಿಕೊಪ್ಪ 18.20 ಮಿ.ಮೀ.ಮಳೆಯಾಗಿದೆ.

8 ಜಿಲ್ಲೆಗಳಲ್ಲಿ ವಾಡಿಕೆ ಮಳೆ
ಜೂನ್ 21ರಂದು ರಾಜ್ಯದಲ್ಲಿ ಶೇ.70ರಷ್ಟು ಮಳೆಕೊರತೆಯಾಗಿತ್ತು. ಅದು ಇವತ್ತು ಕಡಿಮೆಯಾಗಿ ಇಡೀ ರಾಜ್ಯದಲ್ಲಿ 38 ಶೇ.ಕ್ಕೆ ಇಳಿದಿದೆ. ಕರಾವಳಿಯಲ್ಲಿ ಶೇ.31ಕ್ಕೆ ಇಳಿದಿದೆ. 8 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಬೀದರ್, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು ವಾಡಿಕೆ ಮಳೆಯಾಗಿರುವ ಜಿಲ್ಲೆಗಳಾಗಿವೆ. ಉಳಿದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗಗ ಜಿಲ್ಲೆಗಳಲ್ಲಿ ಮಳೆ ಕೊರತೆ ಹೆಚ್ಚಾಗಿದೆ. ಆದರೆ ಅಲ್ಲಿ ಬುಧವಾರ ಮತ್ತು ಗುರುವಾರ ಉತ್ತಮ ಮಳೆಯಾಗುವ ಸಾಧ್ಯೆತೆ ಇದೆ. 

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಬುಧವಾರದಿಂದ 5 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತಮುತ್ತ ಗುರುವಾ+ರ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಜಾಸ್ತಿ ಬೀಸುವ ಸಾಧ್ಯತೆ ಇದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com