ಬೀದರ್: ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ!

ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಆಟೋ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೀದರ್: ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಆಟೋ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. 

ಹುಮನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತರನ್ನು 28 ವರ್ಷದ ಅಂಕುಶ್ ಹುಚ್ಚೇನೂರ್ ಅವರ ಮಕ್ಕಳಾದ 6 ವರ್ಷದ ತನು ಹಾಗೂ 5 ವರ್ಷದ ಸಾಯಿರಾಜ್ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು ಹುಮನಾಬಾದ್ ಪೊಲೀಸರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಮೇಲೆತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com