ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ ಶೇ.50 ರಿಯಾಯಿತಿ; ಮೊದಲ ದಿನ 22.49 ಲಕ್ಷ ದಂಡ ಸಂಗ್ರಹ!
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, ಗುರುವಾರ ಬೆಳಿಗ್ಗೆಯಿಂದ ರಾತ್ರಿ 8 ಗಂಟೆಯವರೆಗೆ 22.49 ಲಕ್ಷ ರು ದಂಡ ಸಂಗ್ರಹವಾಗಿದೆ.
Published: 07th July 2023 01:22 PM | Last Updated: 07th July 2023 05:23 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, ಗುರುವಾರ ಬೆಳಿಗ್ಗೆಯಿಂದ ರಾತ್ರಿ 8 ಗಂಟೆಯವರೆಗೆ 22.49 ಲಕ್ಷ ರು ದಂಡ ಸಂಗ್ರಹವಾಗಿದೆ.
ರಿಯಾಯಿತಿ ಘೋಷಣೆ ಆದೇಶ ಹೊರಬೀಳುತ್ತಿದ್ದಂತೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ದಂಡ ಪಾವತಿಸಲು ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಇದರಿಂದಾಗಿ ಮೊದಲ ದಿನವೇ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, 7,216 ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಣೆ
ರಿಯಾಯಿತಿ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಸಂಚಾರ ಪೊಲೀಸರು, ‘2023ರ ಫೆಬ್ರುವರಿ 11ರೊಳಗಿನ ಪ್ರಕರಣಗಳಿಗೆ ರಿಯಾಯಿತಿ ಸೌಲಭ್ಯ ಅನ್ವಯವಾಗಲಿದೆ. ಸೆಪ್ಟೆಂಬರ್ 9ರವರೆಗೆ ದಂಡ ಪಾವತಿಸಲು ಅವಕಾಶವಿದೆ’ ಎಂದಿದ್ದಾರೆ.