
ಸಾಂದರ್ಭಿಕ ಚಿತ್ರ
ಗದಗ: ಒಂಬತ್ತು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿರುವ ಘಟನೆ ಕರ್ನಾಟಕದ ಗದಗ ಜಿಲ್ಲೆಯ ಗಜೇಂದ್ರಗಡ ನಗರದಲ್ಲಿ ಶನಿವಾರ ನಡೆದಿದೆ.
ನಗರದಲ್ಲಿ ಬೀದಿ ನಾಯಿಗಳು ದಾಳಿ ಹೆಚುತ್ತಿದ್ದು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಆದಿತ್ಯ ಹನುಮಂತಪ್ಪ ಪವಾರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಪಟ್ಟಣದ ಹಿರೇ ಬಜಾರ್ ರಸ್ತೆಯಲ್ಲಿ ಬಾಲಕ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮಧ್ಯಾಹ್ನ ಊಟಕ್ಕೆ ಮನೆಗೆ ಬಂದು ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ನಾಯಿಗಳು ದಾಳಿ ನಡೆಸಿವೆ.
ಇದನ್ನು ಓದಿ: ಬೀದಿ ನಾಯಿ ಸಮೀಕ್ಷೆಗೆ ಡ್ರೋಣ್ ಬಳಕೆ; ಬಿಬಿಎಂಪಿ ಹೊಸ ಪ್ರಯೋಗ
ನಾಯಿಗಳ ಹಠಾತ್ ದಾಳಿಯನ್ನು ತಕ್ಷಣ ಗಮನಿಸಿದ ದಾರಿಹೋಕರು ಬಾಲಕನನ್ನು ರಕ್ಷಿಸಿದ್ದಾರೆ.
ಬಾಲಕರು ಮತ್ತು ವೃದ್ಧರು ಸೇರಿದಂತೆ ಜನರ ಮೇಲೆ ನಾಯಿಗಳ ಹಿಂಡು ದಾಳಿ ನಡೆಸುತ್ತಿದ್ದು, ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.