
ಅಪಘಾತ ದೃಶ್ಯ
ಚಿಕ್ಕಬಳ್ಳಾಪುರ: ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ.
ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದ್ದು ಘಟನೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಜೈನ ಮುನಿಯ ಬರ್ಬರ ಹತ್ಯೆ!
ಅಪಘಾತದಲ್ಲಿ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ಟೆಂಪೊಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.