ಕೊಡಗು: ಹವಾಮಾನ ವೈಪರೀತ್ಯ, ವನ್ಯಜೀವಿ ಸಂಘರ್ಷದಿಂದ ಭತ್ತದ ಕೃಷಿಗೆ ತೀವ್ರ ಹಿನ್ನಡೆ

ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿಲ್ಲ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಹವಾಮಾನ ವೈಪರೀತ್ಯ, ಮತ್ತು ವನ್ಯಜೀವಿ ಸಂಘರ್ಷದಿಂದ ಭತ್ತದ ಕೃಷಿ ತೀವ್ರ...
ಭತ್ತದ ನಾಟಿಯಲ್ಲಿ ತೊಡಗಿರುವ ಮಹಿಳೆಯರು
ಭತ್ತದ ನಾಟಿಯಲ್ಲಿ ತೊಡಗಿರುವ ಮಹಿಳೆಯರು

ಮಡಿಕೇರಿ: ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿಲ್ಲ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಹವಾಮಾನ ವೈಪರೀತ್ಯ, ಮತ್ತು ವನ್ಯಜೀವಿ ಸಂಘರ್ಷದಿಂದ ಭತ್ತದ ಕೃಷಿ ತೀವ್ರ ಹಿನ್ನಡೆಯಾಗುತ್ತಿದೆ.

ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳು, ನೈಸರ್ಗಿಕ ವಿಕೋಪಗಳು ಮತ್ತು ಹೆಚ್ಚಿದ ವನ್ಯಜೀವಿ ಸಂಘರ್ಷಗಳು ಭತ್ತದ ಕೃಷಿಯ ಮೇಲೆ ಪರಿಣಾಮ ಬೀರುವ ಇತರ ಅಂಶಗಳಾಗಿದ್ದು, ಪ್ರಸ್ತುತ ಕೇವಲ 48 ಹೆಕ್ಟೇರ್ ಭೂಮಿಯಲ್ಲಿ ಮಾತ್ರ ಭತ್ತ ಬೆಳೆಯಲಾಗುತ್ತಿದೆ.

ಆರು ವರ್ಷಗಳ ಹಿಂದೆ, ಕೊಡಗಿನಾದ್ಯಂತ ಸುಮಾರು 35,000 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಭತ್ತ ಬೆಳೆಯಲಾಗುತ್ತಿತ್ತು. ಆದರೆ, ಕೃಷಿ ಇಲಾಖೆಯು ಭತ್ತ ಬೆಳೆಯುವ ಗುರಿಯನ್ನು ಈಗ 30,500 ಹೆಕ್ಟೇರ್‌ಗೆ ಇಳಿಸಿದ್ದರಿಂದ ಕೃಷಿಯ ಪ್ರಮಾಣವು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.

“ಇನ್ನು ಹೆಚ್ಚುತ್ತಿರುವ ವನ್ಯಜೀವಿ ಸಂಘರ್ಷವು ಜಿಲ್ಲೆಯ ಹಲವಾರು ಕೃಷಿಭೂಮಿಗಳಲ್ಲಿ ರೈತರು ಭತ್ತದ ಕೃಷಿ ತ್ಯಜಿಸಲು ಒಂದು ಕಾರಣ ಎನ್ನಲಾಗುತ್ತಿದೆ. ಇದಲ್ಲದೆ, ಅನೇಕ ರೈತರು ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಮುಂದಾಗಿದ್ದು, ಕೃಷಿ ಭೂಮಿಯನ್ನು ಅಡಿಕೆ ತೋಟಗಳಾಗಿ ಪರಿವರ್ತಿಸುತ್ತಿರುವುದರಿಂದ ಭತ್ತದ ಕೃಷಿ ಕಡಿಮೆಯಾಗಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಶೇಖ್ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟು 23180 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಭತ್ತ ಬೆಳೆಯಲಾಗಿದ್ದು, ಕಳೆದ ವರ್ಷ ಶೇ.76 ಗುರಿ ಸಾಧಿಸಲಾಗಿತ್ತು. ಕಳೆದ ವರ್ಷ ಮಳೆಯಿಂದಾಗಿ 384 ಹೆಕ್ಟೇರ್‌ಗೂ ಹೆಚ್ಚು ಬೆಳೆ ನಷ್ಟವಾಗಿತ್ತು.

ದಕ್ಷಿಣ ಕೊಡಗಿನ ರೈತರು ಭತ್ತದ ಕೃಷಿಯನ್ನು ಕೈ ಬಿಟ್ಟಿದ್ದಾರೆ. ಕಳೆದ ವರ್ಷ 14000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿತ್ತು. ಆದರೆ 9960 ಹೆಕ್ಟೇರ್‌ನಲ್ಲಿ ಮಾತ್ರ ಭತ್ತ ಬೆಳೆಯಲಾಗಿದೆ. ಹವಾಮಾನ ವೈಪರೀತ್ಯ ಹಾಗೂ ಕಾಡಾನೆಗಳ ಓಡಾಟ ಹೆಚ್ಚಾದ ಕಾರಣ ದಕ್ಷಿಣ ಕೊಡಗಿನಲ್ಲಿ ಹಲವರು ಕೃಷಿಯನ್ನು ತ್ಯಜಿಸಿದ್ದಾರೆ.

ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ವಿಳಂಬವಾಗಿದ್ದು, ಭತ್ತದ ನಾಟಿ ಕಾರ್ಯ ಇನ್ನೂ ವೇಗ ಪಡೆದುಕೊಂಡಿಲ್ಲ. ಮಡಿಕೇರಿ ತಾಲೂಕಿನಲ್ಲಿ ಈ ವರ್ಷ ಇಲ್ಲಿಯವರೆಗೆ ಕೇವಲ 40 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಭತ್ತ ನಾಟಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com