ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಇಬ್ಬರು ಬೈಕ್ ಸವಾರರ ದುರ್ಮರಣ

ಲಾರಿಯೊಂದು ಬೈಕ್‌ ಡಿಕ್ಕಿ ಹೊಡೆದು  ಪರಾರಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ  ಕಳೆದುಕೊಂಡ ಘಟನೆ  ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಹೊಸೂರು ಮುಖ್ಯರಸ್ತೆ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ಅವಘಡ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾರಿಯೊಂದು ಬೈಕ್‌ ಡಿಕ್ಕಿ ಹೊಡೆದು  ಪರಾರಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ  ಕಳೆದುಕೊಂಡ ಘಟನೆ  ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಹೊಸೂರು ಮುಖ್ಯರಸ್ತೆ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ಅವಘಡ ಸಂಭವಿಸಿದೆ.

ಓರ್ವ ಮೃತನನ್ನು ಮಂಗಮ್ಮನಪಾಳ್ಯ ವಾಸಿ ಮಂಜಪ್ಪ (32) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಲಾರಿ ಹಿಂಬದಿಯಿಂದ ಬೈಕ್‍ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ಬಳಿಕ ಲಾರಿಯನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.

ಡಿಕ್ಕಿಯ ಹೊಡೆತಕ್ಕೆ ಬೈಕ್‌ ಉರುಳಿ ಬಿದ್ದು ಇಬ್ಬರೂ ಸವಾರರು ರಸ್ತೆಗೆ ಬಿದ್ದರು. ಒಬ್ಬರ ಮೇಲೊಬ್ಬರು ಬಿದ್ದ ಅವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬೆಳಗ್ಗೆ 10 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದೆ.

ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com