ಕೊಪ್ಪಳ: ಬಾಲಕಿಯರನ್ನು ಗುರಿಯಾಗಿಸಿ ಶಾಲೆಯ ಗೋಡೆ ಮೇಲೆ ಅಶ್ಲೀಲ ಬರಹ

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ವಿಶೇಷವಾಗಿ ಮುಸ್ಲಿಂ ಸಮುದಾಯದ ಹುಡುಗಿಯರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಅಶ್ಲೀಲ ಬರಹ ಬರೆದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಯಶೋದಾ ವಂಟಗೋಡಿ
ಯಶೋದಾ ವಂಟಗೋಡಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ವಿಶೇಷವಾಗಿ ಮುಸ್ಲಿಂ ಸಮುದಾಯದ ಹುಡುಗಿಯರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಅಶ್ಲೀಲ ಬರಹ ಬರೆದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಪ್ರಾಥಮಿಕ ಶಾಲೆಯ ಗೋಡೆಗಳ ಮೇಲೆ ಅವಾಚ್ಯ ಶಬ್ದಗಳು ಬರೆದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಗಂಗಾವತಿ ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಕೊಪ್ಪಳ ಎಸ್ಪಿ ಯಶೋದಾ ವಂಟಗೋಡಿ ಅವರು ತಿಳಿಸಿದ್ದಾರೆ.

ಇದರಲ್ಲಿ ಇಬ್ಬರು ಬಾಲಕರು ಭಾಗಿಯಾಗಿರುವ ಬಗ್ಗೆ ನಮಗೆ ಮಾಹಿತಿ ಇದ್ದು, ಈ ಸಂಬಂಧ ಸುಮಾರು 15 ಬಾಲಕರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ವಂಟಗೋಡಿ ಅವರು ಹೇಳಿದ್ದಾರೆ. 

ವಿಷಯದ ಸೂಕ್ಷ್ಮತೆಯನ್ನು ಪರಿಗಣಿಸಿ, ತನಿಖೆಯನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಲಾಗಿದೆ ಮತ್ತು ಶಾಲಾ ಆವರಣದಲ್ಲಿ ಸಿಸಿಟಿವಿ ಅಳವಡಿಸಲು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಹೊರಗಿನವರ ಕೈವಾಡವನ್ನು ತಳ್ಳಿಹಾಕಿದ ವಂಟಗೋಡಿ ಅವರು, ಈ ಪ್ರದೇಶದಲ್ಲಿ ನಾನಾ ಕಾರಣಗಳಿಂದ ರಾತ್ರಿ ಗಸ್ತು ನಡೆಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಈ ಬಗ್ಗೆ ದೂರು ದಾಖಲಾಗಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಪೊಲೀಸರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com