ಮಂಗಳೂರು: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಸಾವು
ತನ್ನ ಮನೆಯ ಬಳಿ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ 14 ವರ್ಷದ ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Published: 17th July 2023 01:29 PM | Last Updated: 17th July 2023 01:29 PM | A+A A-

ಪ್ರಾತಿನಿಧಿಕ ಚಿತ್ರ
ಮಂಗಳೂರು: ತನ್ನ ಮನೆಯ ಬಳಿ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ 14 ವರ್ಷದ ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತನನ್ನು ಎಂಟನೇ ತರಗತಿಯ ವಿದ್ಯಾರ್ಥಿ ಶ್ರೀಶಾ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮನೆಯ ಬಳಿ ಆಟವಾಡುತ್ತಿದ್ದಾಗ ಉಯ್ಯಾಲೆಯ ಹಗ್ಗ ಕೊರಳಿಗೆ ಸಿಕ್ಕಿಹಾಕಿಕೊಂಡಿದೆ. ಈ ವೇಳೆ ಆತ ಕೆಳಗೆ ಬಿದ್ದಿದ್ದಾನೆ. ಇದನ್ನು ಆತನ ತಂಗಿ ಗಮನಿಸಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ.
ಬಾಲಕನನ್ನು ಕೂಡಲೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಆತ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.