ಬೆಂಗಳೂರು: ಅಸ್ಸಾಂ ಯುವತಿ ಮೇಲೆ ಪ್ರಿಯಕರ, ಸ್ನೇಹಿತರಿಂದ ಅತ್ಯಾಚಾರ; ಆರೋಪಿಗಳ ಪತ್ತೆಗೆ ಶೋಧಕಾರ್ಯ ಚುರುಕು

ಬೆಂಗಳೂರಿನಲ್ಲಿ ಅಸ್ಸಾಂನ 20 ವರ್ಷದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಅಸ್ಸಾಂನ 20 ವರ್ಷದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜುಲೈ 13 ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇತ್ತೀಚೆಗಷ್ಟೇ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಪ್ರಿಯಕರ ಶಾಹೀದ್ ಉದ್ದೀನ್‌ನನ್ನು ಪೊಲೀಸರು ಬಂಧಿಸಿದ್ದು, ಇತರ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಶಾಹೀದ್ ಉದ್ದೀನ್‌ನ ಸ್ನೇಹಿತರು ಎನ್ನಲಾದ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತೆ ಮತ್ತು ಶಾಹೀದ್ ಉದ್ದೀನ್ ಕಳೆದ ಹಲವು ವರ್ಷಗಳಿಂದ ರಿಲೇಷನ್‌ಶಿಪ್‌ನಲ್ಲಿದ್ದರು. ಮದುವೆಯಾಗುವುದಾಗಿ ಭರವಸೆ ನೀಡಿದ್ದ ಶಾಹೀದ್, ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ. ಒಂದೂವರೆ ವರ್ಷದ ಹಿಂದೆ ಆಕೆ ಬೆಂಗಳೂರಿಗೆ ಬಂದ ಬಳಿಕ ಆತನ ಬಾಡಿಗೆ ಮನೆಯಲ್ಲಿಯೇ ವಾಸವಾಗಿದ್ದು, ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ.

ಆಕೆಯ ಖಾಸಗಿ ಚಿತ್ರಗಳು ಮತ್ತು ವಿಡಿಯೋಗಳನ್ನು ತನ್ನ ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾನೆ. ಶಾಹೀದ್ ಉದ್ದೀನ್ ಮತ್ತು ಇತರ ನಾಲ್ವರು ಆರೋಪಿಗಳು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ಶಾಹೀದ್ ಉದ್ದೀನ್ ಸಂತ್ರಸ್ತೆಯನ್ನು ಪ್ರೀತಿಯಲ್ಲಿ ಬೀಳಿಸಿಕೊಂಡು, ವೇಶ್ಯಾವಾಟಿಕೆಗೆ ತಳ್ಳಲು ಯೋಜಿಸಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಶಾಹೀದ್‌ಗೆ ಈಗಾಗಲೇ ಮದುವೆಯಾಗಿದ್ದು, ಕುಟುಂಬವನ್ನು ಹೊಂದಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com