
ಸ್ಪೀಕರ್ ಯುಟಿ ಖಾದರ್ ಅವರಿಗೆ ಪ್ರಶಸ್ತಿ ಪ್ರದಾನ
ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ' ದಿ ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಬುದ್ದಿಜೀವಿಗಳ ಸಮ್ಮೇಳನದಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಛತ್ತೀಸ್ ಗಢದ ರಾಜ್ಯಪಾಲ ಬಿಸ್ವ ಭೂಷಣ್ ಹರಿಚರಣ್, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ವಿ.ಗೋಪಾಲ್ ಗೌಡ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಭಾರತೀಯ ಬುದ್ಧಿಜೀವಿಗಳ ಸಮ್ಮೇಳನವು ಪದಾಧಿಕಾರಿಗಳು, ಸದಸ್ಯರು ಮತ್ತು ಪೋಷಕರಾಗಿ ಸ್ಥಾನಗಳನ್ನು ಹೊಂದಿರುವ ಹಿರಿಯ ನ್ಯಾಯಾಧೀಶರು ಮತ್ತು ಅಧಿಕಾರಿಗಳನ್ನು ಒಳಗೊಂಡಿದೆ.
ಸಂಸ್ಥೆಯು ಈ ಹಿಂದೆ ಹಿರಿಯ ನ್ಯಾಯಾಧೀಶರು, ಕಲಾವಿದರು, ವ್ಯಾಪಾರ ಉದ್ಯಮಿಗಳು, ವಿಜ್ಞಾನಿಗಳು ಮತ್ತು ಇತರೆ ಬುದ್ಧಿಜೀವಿಗಳು ಸೇರಿದಂತೆ ಪ್ರತಿಷ್ಠಿತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.