ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಬಗ್ಗೆ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯ
ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ ರಮಾನಾಥ್ ರೈ ಸೋಮವಾರ ಒತ್ತಾಯಿಸಿದ್ದಾರೆ.
Published: 18th July 2023 08:19 AM | Last Updated: 18th July 2023 08:19 AM | A+A A-

ಮಾಜಿ ಸಚಿವ ರಮಾನಾಥ್ ರೈ
ಮಂಗಳೂರು: ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ ರಮಾನಾಥ್ ರೈ ಸೋಮವಾರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸುತ್ತಿದ್ದಾರೆ. ಕಟೀಲು ತಪ್ಪು ಮಾಹಿತಿ ರವಾನಿಸಿ ಕೊಲೆಗೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ ಎಂಬ ಭಾವನೆ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.
ಯಾವುದೇ ಕಾಂಗ್ರೆಸ್ ನಾಯಕರು ಎಲ್ಲಿಯೂ ಕೋಮು ಪ್ರಚೋದನಕಾರಿ ಭಾಷಣ ಮಾಡಿಲ್ಲ ಎಂದು ರೈ ಪ್ರತಿಪಾದಿಸಿದರು.
ಬಿಜೆಪಿಯಿಂದ ಉಂಟಾಗಿರುವ ಗೊಂದಲ ನಿವಾರಣೆಗೆ ಹರೀಶ್ ಪೂಜಾರಿ, ವಿನಾಯಕ ಬಾಳಿಗ, ಜಲೀಲ್ ಕರೋಪಾಡಿ, ದೀಪಕ್, ಪ್ರವೀಣ್ ನೆಟ್ಟಾರು, ಫಾಜಿಲ್, ಮಸೂದ್ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಕೋಮು ಹತ್ಯೆಗಳ ಬಗ್ಗೆ ಎಸ್‌ಐಟಿಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಈ ಬೇಡಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.