ಸಾಂದರ್ಭಿಕ ಚಿತ್ರ
ರಾಜ್ಯ
ಪರಸ್ಪರ ಸಂಘರ್ಷ: ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವು
ಕ್ಷುಲ್ಲಕ ಕಾರಣವಾದ ಪರಸ್ಪರ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದ್ದು, ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮಂಗಳೂರು: ಕ್ಷುಲ್ಲಕ ಕಾರಣವಾದ ಪರಸ್ಪರ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದ್ದು, ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಕೆಲಸದ ವಿಚಾರವಾಗಿ ಸಹ ಕಾರ್ಮಿಕನ ಜೊತೆ ಜಗಳ ನಡೆದು ಕಟ್ಟಡ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ ಒಡಿಶಾ ಮೂಲದ ಗಣೇಶ್ (50 ವರ್ಷ) ಕೊಲೆಯಾಗಿದ್ದು, ಈತ ಕಟಪಾಡಿ-ಶಿರ್ವ ರಸ್ತೆಯ ಬಳಿ ಕಟ್ಟಡ ಕಾಮಗಾರಿಯಲ್ಲಿ ನಿರತರಾಗಿದ್ದರು. ಸೋಮವಾರ ರಾತ್ರಿ ಕೆಲಸ ಸಂಬಂಧಿತ ವಿಚಾರದಲ್ಲಿ ಇಬ್ಬರು ಕಾರ್ಮಿಕರು ಜಗಳ ಮಾಡಿಕೊಂಡಿದ್ದರು. ಈ ವೇಳೆ ನಡೆದ ಘರ್ಷಣೆಯಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಸಹ ಕಾರ್ಮಿಕರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಕಾರ್ಮಿಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ