ಎಸ್.ಆರ್. ಪಾಟೀಲ್, ಶ್ರೀಕಂಠೇಗೌಡಗೆ ವಿಧಾನ ಪರಿಷತ್ತಿನ ಅತ್ಯುತ್ತಮ ಶಾಸಕ ಪ್ರಶಸ್ತಿ
2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರಿಗೆ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
Published: 19th July 2023 08:41 AM | Last Updated: 19th July 2023 08:16 PM | A+A A-

ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀಕಂಠೇಗೌಡ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರು: 2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರಿಗೆ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಸಂಸತ್ತು, ವಿಧಾನಸಭೆಯನ್ನು ದೇವರು ಎಂದು ಕರೆಯುತ್ತೇವೆ. ಎಲ್ಲರಿಗೂ ಒಳಿತು ಮಾಡು ಎಂದು ಕೇಳಿಕೊಂಡರೆ ಒಳಿತಾಗುತ್ತದೆ. ನಾವು ಇಲ್ಲಿಗೆ ಬರುವುದು ದೇಗುಲಕ್ಕೆ ಬಂದಂತೆ. ನಾವು ಜನಸೇವಕರು ಎಂದು ಹೇಳಿದರು.
ಇದನ್ನೂ ಓದಿ: ಬಿಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಶಾಸಕರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಭಾರತ ಸಂವಿಧಾನ ಕೇವಲ ವಕೀಲರ ದಾಖಲೆಯಲ್ಲ. ಅದು ಜೀವನ್ಮುಖಿಯಾಗಿದೆ. ಅದರ ಚೈತನ್ಯ ನಿರಂತರವಾದುದು. ನಮ್ಮ ಸಮಾಜ ಹೇಗಿರಬೇಕು, ಹೇಗೆ ಆಳಿಸಿಕೊಳ್ಳಬೇಕೆಂದು ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಸರ್ಕಾರ, ಮೇಲ್ಮನೆ, ಕೆಳಮನೆ ಶಾಸಕರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಾಮಾಜಿಕ ಬದ್ಧತೆ ನಮ್ಮ ಮುಖ್ಯ ಗುರಿಯಾಗಿರಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಎನ್.ಎಸ್.ಬೋಸರಾಜು, ಪರಿಷತ್ ಸದಸ್ಯ ಭೋಜೇಗೌಡ, ಟಿ.ಎ.ಶರವಣ, ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ.ನಾರಾಯಣಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.