ಬೆಂಗಳೂರಲ್ಲಿ ತಂದೆ, ತಾಯಿಯನ್ನು ಕೊಂದು ಪರಾರಿಯಾಗಿದ್ದ ಪುತ್ರ ಮಡಿಕೇರಿಯಲ್ಲಿ ಬಂಧನ

ಕುಡಿದ ಮತ್ತಿನಲ್ಲಿ ತನ್ನ ಹೆತ್ತ ತಂದೆ, ತಾಯಿಯನ್ನು ರಾಡ್​ನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದ ಪಾಪಿ ಪುತ್ರ ಶರತ್ ನನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ.
ಆಸ್ಪತ್ರೆಯಲ್ಲಿ ಆರೋಪಿ ಶರತ್
ಆಸ್ಪತ್ರೆಯಲ್ಲಿ ಆರೋಪಿ ಶರತ್

ಬೆಂಗಳೂರು: ಕುಡಿದ ಮತ್ತಿನಲ್ಲಿ ತನ್ನ ಹೆತ್ತ ತಂದೆ, ತಾಯಿಯನ್ನು ರಾಡ್​ನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದ ಪಾಪಿ ಪುತ್ರ ಶರತ್ ನನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ.

ಗುರುವಾರ ತಡರಾತ್ರಿ ಮದೆನಾಡು ಗ್ರಾಮದಾದ್ಯಂತ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯ ಬಗ್ಗೆ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ.

ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿದ ಶರತ್ ಮಾನಸಿಕ ಅಸ್ವಸ್ಥನೆಂದು ಶಂಕಿಸಿದ ಪೊಲೀಸರು ಆತನನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ವಿಚಾರಣೆ ಮುಂದುವರೆಸಿದ್ದಾರೆ.

ಆಸ್ಪತ್ರೆಯಲ್ಲಿ ವಿಚಾರಣೆ ನಡೆಸಿದಾಗ, ಬೆಂಗಳೂರಿನ ಕೊಡಿಗೇಹಳ್ಳಿಯ ನಿವಾಸಿ ಶರತ್(27) ತನ್ನ ಪೋಷಕರಾದ ಭಾಸ್ಕರ್(61) ಮತ್ತು ಶಾಂತಾ(60) ಅವರನ್ನು ಜುಲೈ 17 ರಂದು ಕೊಲೆ ಮಾಡಿದ ವಿಚಾರ ತಿಳಿದುಬಂದಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸರು ಕೂಡಲೇ ಕೊಡಿಗೇಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಕೊಡಿಗೇಹಳ್ಳಿ ಪೊಲೀಸರು ಮಡಿಕೇರಿಗೆ ಭೇಟಿ ನೀಡಿ ಶರತ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com