ಭಯೋತ್ಪಾದಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಎನ್ಐಎ ತಂಡ; ಬಂಧಿತ ಐವರು ಶಂಕಿತ ಉಗ್ರರ ವಿಚಾರಣೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಇತರೆಡೆ ಬಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೊಳಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಇತರೆಡೆ ಬಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೊಳಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪೊಲೀಸ್ ವಶದಲ್ಲಿರುವ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫಾಜಿಲ್ ರನ್ನು ಎನ್‌ಐಎ ತಂಡ ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗುತ್ತದೆಯೇ ಎಂಬುದನ್ನು ಈಗಲೇ ಹೇಳುವುದು ಕಷ್ಟ. ಶಂಕಿತರ ವಿಚಾರಣೆ ನಡೆಸಬೇಕಿದ್ದು, ಆವರಿಂದ ವಶಪಡಿಸಿಕೊಂಡ ವಸ್ತು, ಇತರೆ ಮಾಹಿತಿಗಳ ಆಧಾರದ ಮೇಲೆ ತನಿಖೆಯೂ ಅವಲಂಬಿತವಾಗಿರಲಿದೆ ಎಂದು ಮೂಲಗಳು ತಿಳಿಸಿವೆ.

2008 ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದಲ್ಲಿ ಕೈವಾಡವಿರುವ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ತಡಿಯಂತವಿಡೆ ನಜೀರ್ ಪ್ರಕರಣದ ಮೇಲೆ ಕಣ್ಣಿಟ್ಟಿರುವ ಗುಪ್ತಚರ ಬ್ಯೂರೋ ಸಿಸಿಬಿಗೆ ಉಗ್ರರ ಕುರಿತು ಮಾಹಿತಿ ನೀಡಿತ್ತು. ಐಬಿ ನೀಡಿದ ಮಾಹಿತಿ ಅನ್ವಯ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡಸಿ ಐವರನ್ನು ಶಂಕಿತರನ್ನು ಬಂಧನಕ್ಕೊಳಪಡಿಸಿದೆ.

ಪಾಕಿಸ್ತಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ)ದ ದಕ್ಷಿಣ ಭಾರತ ಕಮಾಂಡರ್ ಆಗಿದ್ದ ನಜೀರ್ ಹಾಗೂ ಆತನ ಸಹಚರ ಶಫಜ್ ನನ್ನು 2008 ರ ಬೆಂಗಳೂರು ಸ್ಫೋಟ ಪ್ರಕರಣ ಸಂಬಂಧ ಮೇಘಾಲಯದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಂಧನಕ್ಕೊಳಪಡಿಸಲಾಗಿತ್ತು.

ನಜೀರ್ ಕಮಾಂಡರ್ ಆಗುವಷ್ಟು ಬೆಳೆದಿದ್ದ. ಜಿಹಾದಿ ಪ್ರಚಾರದಲ್ಲಿ ದುರ್ಬಲ ಯುವಕರನ್ನು ಸುಲಭವಾಗಿ ಬಲೆಗೆ ಬೀಳಿಸುತ್ತಿದ್ದ. ಜೈಲಿನಲ್ಲಿದ್ದುಕೊಂಡೇ ಬೆಂಗಳೂರು ಭಯೋತ್ಪಾದಕ ಸಂಚಿನ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿರುವ ಜುನೈದ್, ಬಂಧಿತ ಐವರು ಶಂಕಿತರ ಉಗ್ರರು ಹಾಗೂ ಇನ್ನಿತರನ್ನು ಜಿಹಾದಿಗಳಾಗಿ ಪರಿವರ್ತಿಸಿದ್ದ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ತನಿಖೆ ಮುಂದುವರೆದಿದ್ದು, ಜಾಲಕ್ಕೆ ಬಿದ್ದ ಮತ್ತಷ್ಟು ಜನರ ಮಾಹಿತಿಗಳು ಬೆಳಕಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸುಹೇಲ್, ಉಮರ್, ಜಾಹಿದ್, ತಬ್ರೇಜ್, ಪಾಷಾ ಮತ್ತು ಫಾಜಿಲ್ ಅವರನ್ನು ಬಂಧಿಸಲಾಗಿದೆ.

ಈ ನಡುವೆ ಭದ್ರಪ್ಪ ಲೇಔಟ್‌ನಲ್ಲಿರುವ ತಬ್ರೇಜ್ ಮನೆಯಲ್ಲಿ ಗ್ರೆನೇಡ್ ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಗ್ರೆನೇಡ್ ಗಳನ್ನು ಜುನೈದ್ ರವಾನಿಸಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಈ ಕುರಿತು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com