ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿದ ಆರೋಪದ ಮೇಲೆ ಪಾದ್ರಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಚರ್ಚ್‌ವೊಂದರ ಪಾದ್ರಿ ಹಾಗೂ ಚರ್ಚ್ ನ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ ಫ್ರಾನ್ಸಿಸ್ ಫೆರ್ನಾಂಡಿಸ್(49) ಅವರನ್ನು ಬಂಧಿಸಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಚರ್ಚ್‌ವೊಂದರ ಪಾದ್ರಿ ಹಾಗೂ ಚರ್ಚ್ ನ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ ಫ್ರಾನ್ಸಿಸ್ ಫೆರ್ನಾಂಡಿಸ್(49) ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಚರ್ಚ್ ನ ಪ್ರಿ-ಯೂನಿವರ್ಸಿಟಿ ಕಾಲೇಜಿನಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪಾದ್ರಿ ಫೆರ್ನಾಂಡಿಸ್ ಅವರ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆ ಅಡಿ ಕೇಸ್ ದಾಖಲಾಗಿದೆ.

ಬಂಧಿತ ಪಾದ್ರಿಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಆರೋಪಿ ಮತ್ತು ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಶಿವಮೊಗ್ಗ ಡಿವೈಎಸ್ ಪಿ ಬಾಲರಾಜು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com