ಸಿದ್ದರಾಮಯ್ಯ ಅನರ್ಹತೆ ಕೋರಿ ಅರ್ಜಿ: ಜುಲೈ 28ಕ್ಕೆ ಹೈಕೋರ್ಟ್ ವಿಚಾರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಜುಲೈ 28 ರಂದು ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಡೆಸಲಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಜುಲೈ 28 ರಂದು ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಡೆಸಲಿದೆ.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ ಅವರು, ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯು ನ್ಯಾಯಮೂರ್ತಿ ಎಸ್‌ ಸುನಿಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರನ್ನು ಕುರಿತು ಪೀಠವು ಕಚೇರಿಯು ಕೆಲವೊಂದು ಆಕ್ಷೇಪಣೆಗಳನ್ನು ಎತ್ತಿದೆ. ಅವುಗಳನ್ನು ಸರಿಪಡಿಸಿ, ಜುಲೈ 28ಕ್ಕೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com